ಸ್ವಾಸ್ಥ್ಯ ರಕ್ಷಣೆ ಕಡೆ ಇರಲಿ ಎಲ್ಲರ ಕಾಳಜಿ

ವಗ್ಗ ಸಮೀಪದ ಕಾಡಬೆಟ್ಟು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ತಪಾಸಣೆ ಉಚಿತ ಶಿಬಿರ ನಡೆಯಿತು. ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಡಿ., ಒಕ್ಕೂಟದ ಅಧ್ಯಕ್ಷ ಉಮೇಶ್ ಮೊದಲಾದವರಿದ್ದರು.
ವಗ್ಗ ಸಮೀಪದ ಕಾಡಬೆಟ್ಟು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ತಪಾಸಣೆ ಉಚಿತ ಶಿಬಿರ ನಡೆಯಿತು. ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಡಿ., ಒಕ್ಕೂಟದ ಅಧ್ಯಕ್ಷ ಉಮೇಶ್ ಮೊದಲಾದವರಿದ್ದರು.
Published on
ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಜ್ಞಾನವಿಕಾಸ ಕಾರ್ಯಕ್ರಮದಡಿ ಪ್ರತಿ ತಿಂಗಳು ಮಹಿಳೆಯರಿಗೆ ಉಚಿತವಾಗಿ ಆರೋಗ್ಯ ಮಾಹಿತಿ ನೀಡಲಾಗುತ್ತಿದೆ. ಆರೋಗ್ಯ ರಕ್ಷಣೆ ಬಗ್ಗೆ ಎಲ್ಲರೂ ಕಾಳಜಿ ವಹಿಸುವ ಅಗತ್ಯವಿದೆ ಎಂದು ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಡಿ. ಹೇಳಿದರು.
ವಗ್ಗ ಸಮೀಪದ ಕಾಡಬೆಟ್ಟು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ಆರೋಗ್ಯ ತಪಾಸಣೆ ಉಚಿತ ಶಿಬಿರದಲ್ಲಿ ಮಾತನಾಡಿದರು.
ಕಾಡಬೆಟ್ಟು ಒಕ್ಕೂಟ ಮತ್ತು ಮಂಗಳೂರು ಎ.ಜೆ. ಆಸ್ಪತ್ರೆ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಶಿಬಿರವನ್ನು ಕಾವಳಪಡೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಉದ್ಘಾಟಿಸಿದರು. ಒಕ್ಕೂಟದ ಅಧ್ಯಕ್ಷ ಉಮೇಶ್ ಅಧ್ಯಕ್ಷತೆ ವಹಿಸಿದ್ದರು.
ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್, ಬಂಟ್ವಾಳ ಯೋಜನಾಧಿಕಾರಿ ಜಯಾನಂದ, ಹಾಸನ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಡಾ.ಶ್ರೇಯಸ್, ಜನಜಾಗೃತಿ ಸದಸ್ಯ ಪ್ರವೀಣ್, ವಗ್ಗ ವಲಯ ಮೇಲ್ವಿಚಾರಕ ಸುರೇಶ್, ಜ್ಞಾನ ದೀಪ ಶಿಕ್ಷಕಿ ಹರಿಣಾಕ್ಷಿ, ಒಕ್ಕೂಟ ಮತ್ತು ಶೌರ್ಯ ಘಟಕದ ಸದಸ್ಯರು ಇದ್ದರು. 100ಕ್ಕೂ ಹೆಚ್ಚು ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಲೀಲಾವತಿ ಸ್ವಾಗತಿಸಿದರು. ಶಿಕ್ಷಕ ರಾಮಕೃಷ್ಣ ಪ್ರಭು ವಂದಿಸಿದರು. ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net