ಯಡ್ತರೆಯಲ್ಲಿ ಶನಿವಾರ ಬೈಂದೂರು ತಾಲೂಕು ಕಾನೂನು ಸೇವೆಗಳ ಸಮಿತಿಯನ್ನು ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಐ.ಅರುಣ್ ಉದ್ಘಾಟಿಸಿದರು. ಪ್ರಮುಖರಾದ ಅಬ್ದುಲ್ ರಹೀಮ್ ಹುಸೇನ್ ಶೇಕ್, ರಶ್ಮಿ ಎಸ್.ಆರ್., ಪ್ರಶಾಂತ್ ಪೂಜಾರಿ, ರವಿರಾಜ್ ದೀಕ್ಷಿತ್ ಮತ್ತಿತರರು ಇದ್ದರು.
ಬೈಂದೂರು: ಹುಟ್ಟಿನಿಂದ ಸಾವಿನವರೆಗೂ ಪ್ರತಿಯೊಬ್ಬ ವಾನವ ಕಾನೂನಿನ ಪರಿಧಿಯಲ್ಲಿಯೇ ಇರುತ್ತಾನೆ. ಈ ನೆಲೆಯಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ಕನಿಷ್ಠ ಜ್ಞಾನ ಇರಬೇಕು. ಕಾನೂನಿನ ಚೌಕಟ್ಟಿನಲ್ಲಿ ವ್ಯವಹರಿಸಿದರೆ ವಾತ್ರ ನ್ಯಾಯಾಲಯಕ್ಕೆ ಬರುವ ಅಗತ್ಯವಿರುವುದಿಲ್ಲ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಐ.ಅರುಣ್ ಹೇಳಿದರು.
ಯಡ್ತರೆಯಲ್ಲಿ ಶನಿವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಉಡುಪಿ ಜಿಲ್ಲಾ ನ್ಯಾಯಾಂಗ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೈಂದೂರು ವಕೀಲರ ಸಂಘದ ವತಿಯಿಂದ ಬೈಂದೂರು ತಾಲೂಕು ಕಾನೂನು ಸೇವೆಗಳ ಸಮಿತಿ ಉದ್ಘಾಟಿಸಿ ಮಾತನಾಡಿದರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮ್ ಹುಸೇನ್ ಶೇಕ್ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ವಕೀಲರ ಸಂದ ವತಿಯಿಂದ ಎಂ.ಐ.ಅರುಣ್ ಅವರನ್ನು ಸನ್ಮಾನಿಸಲಾಯಿತು.
ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ ಎಸ್.ಆರ್., ಬೈಂದೂರು ವಕೀಲರ ಸಂ ಅಧ್ಯಕ್ಷ ಪ್ರಶಾಂತ್ ಪೂಜಾರಿ, ತಹಸೀಲ್ದಾರ್ ರವಿರಾಜ್ ದೀಕ್ಷಿತ್, ಸಿವಿಲ್ ನ್ಯಾಯಾಧೀಶ ಅಬುತಾಯರ್ ಎ., ಕುಂದಾಪುರ ಡಿವೈಎಸ್‌ಪಿ ಎಚ್.ಡಿ.ಕುಲಕರ್ಣಿ, ಬೈಂದೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಉಪಸ್ಥಿತರಿದ್ದರು.
ಹಿರಿಯ ಸಿವಿಲ್ ನ್ಯಾಯಾಧೀಶ ನಿತಿನ್ ವೈ.ರಾವ್ ಪ್ರಾಸ್ತಾವಿಕ ಮಾತನಾಡಿದರು. ವಕೀಲರ ಸಂ ಉಪಾಧ್ಯಕ್ಷ ಚಿಕ್ಕಯ್ಯ ಶೆಟ್ಟಿ ಸ್ವಾಗತಿಸಿದರು. ಸಹಾಯಕ ಸರ್ಕಾರಿ ಅಭಿಯೋಜಕ ರಾಜಶೇಖರ್ ಪಿ.ಶ್ಯಾಮರಾವ್ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಲಿಂಗಪ್ಪ ಮೇಸ್ತ ಶಿರೂರು ವಂದಿಸಿದರು.