ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ವಾರ್ಷಿಕ ಕ್ರೀಡಾಕೂಟದಲ್ಲಿ ಪ್ರಾಂಶುಪಾಲ ಸಂದೀಪ ಗಾಣಿಗ, ಉಪಪ್ರಾಂಶುಪಾಲ ಸುಜೇಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆ ಮುಖ್ಯಶಿಕ್ಷಕ ಕೃಷ್ಣ ಅಡಿಗ ಮತ್ತಿತರರು ಇದ್ದರು.
ಕುಂದಾಪುರ: ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ವಿದ್ಯಾರ್ಥಿಗಳು ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಜೀವನದಲ್ಲಿ ಶಾಶ್ವತವಲ್ಲ. ಮುಂದಿನ ಜೀವನದಲ್ಲಿ ಯಶಸ್ಸು ಪಡೆಯಬೇಕೆಂದರೆ ಸೋಲು ಅನಿವಾರ್ಯ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುವಾರ್ ಶೆಟ್ಟಿ ಹೇಳಿದರು.
ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ವಾತನಾಡಿದರು.
ಶ್ರೀ ವೆಂಕಟರಮಣ ದೇವ್ ಎಜುಕೇಶನಲ್-ಕಲ್ಚರಲ್ ಟ್ರಸ್ಟ್‌ನ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಆರೋಗ್ಯವೇ ಭಾಗ್ಯವಾಗಿರುವುದರಿಂದ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವುದರ ಮೂಲಕ ಸದೃಢ ಆರೋಗ್ಯ ತಮ್ಮದಾಗಿಸಿಕೊಳ್ಳಿ ಎಂದರು.
ಪ್ರಾಂಶುಪಾಲ ಸಂದೀಪ ಗಾಣಿಗ, ಉಪಪ್ರಾಂಶುಪಾಲ ಸುಜೇಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆ ಮುಖ್ಯಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗ ಮುಖ್ಯಸ್ಥ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗ ಮುಖ್ಯಸ್ಥ ಪ್ರಮೀಳಾ ಡಿಸೋಜ ಉಪಸ್ಥಿತರಿದ್ದರು.
ಕ್ರೀಡಾ ಕಾರ್ಯದರ್ಶಿ ಧೀಮಂತ್ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿನಿಯರಾದ ಆಕಾಂಕ್ಷಾ ಎಸ್.ಪೈ ಸ್ವಾಗತಿಸಿದರು. ಚೈತ್ರಾ ಅತಿಥಿ ಪರಿಚಯಿಸಿದರು. ಕೆ.ಶ್ರೀರಕ್ಷಾ ಶೆಣೈ ವಂದಿಸಿದರು. ಅನುಷ್ಕಾ ನಿರೂಪಿಸಿದರು.