ಕಾಲೇಜ್ ಟ್ರಸ್ಟ್ ಅಧ್ಯಕ್ಷ ಡಾ.ಟಿ.ಸತೀಶ್ ಯು. ಪೈ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ವನಿತಾ ಅವರ ಪತಿ ಗಣೇಶ್ ಮಯ್ಯ, ನಿಯೋಜಿತ ಪ್ರಾಂಶುಪಾಲೆ ಡಾ.ಗಾಯತ್ರಿ ಪೈ, ಪ.ಪೂ. ಕಾಲೇಜ್ನ ಪ್ರಾಂಶುಪಾಲೆ ಪ್ರೊ.ಮಾಲತಿದೇವಿ, ಸಂಧ್ಯಾ ಕಾಲೇಜ್ನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯ್ಕ, ಐಕ್ಯುಎಸಿ ಸಂಯೋಜಕಿ ಪ್ರೊ.ಶೈಲಜಾ ಎಚ್., ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊ.ವೀರಾ ಐಡಾ ಪಿಂಟೋ, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪ.ಪೂ. ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ ಅಶ್ವಿನಿ ಶೆಟ್ಟಿ, ಕಾಲೇಜ್ನ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.