ಡಂಪಿಂಗ್ ಯಾರ್ಡ್‌ನಲ್ಲಿ ಅಗ್ನಿ ಅವಘಡ

 ಕರಿಯಕಲ್ಲು ಡಂಪಿಂಗ್ ಯಾರ್ಡ್‌ನಲ್ಲಿ ಉಂಟಾದ ಅಗ್ನಿ ಅವಘಡ.
ಕರಿಯಕಲ್ಲು ಡಂಪಿಂಗ್ ಯಾರ್ಡ್‌ನಲ್ಲಿ ಉಂಟಾದ ಅಗ್ನಿ ಅವಘಡ.
Published on
ಕಾರ್ಕಳ: ಇಲ್ಲಿನ ಪುರಸಭೆ ವ್ಯಾಪ್ತಿಯ ಕರಿಯಕಲ್ಲು ಡಂಪಿಂಗ್ ಯಾರ್ಡ್‌ಗೆ ಗುರುವಾರ ರಾತ್ರಿ ಬೆಂಕಿ ಹತ್ತಿಕೊಂಡಿದ್ದು, ಅಪಾರ ಪ್ರಮಾಣದ ತ್ಯಾಜ್ಯ ಸುಟ್ಟು ಕರಕಲಾಗಿದೆ. ತ್ಯಾಜ್ಯ ನಿರ್ವಹಣಾ ಘಟಕದ ಯಂತ್ರೋಪಕರಗಳು ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿದೆ.
ಅಗ್ನಿ ಅವಘಡ ನಡೆದ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಗುರುವಾರ ಹಾಗೂ ಶುಕ್ರವಾರ ನಿರಂತರವಾಗಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಕಳ ಅಗ್ನಿಶಾಮಕ ವಾಹನ ಜತೆಗೆ ಮೂಡುಬಿದಿರೆ ಅಗ್ನಿಶಾಮಕ ವಾಹನಗಳು ಅಗ್ನಿ ನಂದಿಸುವಲ್ಲಿ ಸಹಕರಿಸಿದವು.
ಕಾರ್ಯಾಚರಣೆಯಲ್ಲಿ ಕಾರ್ಕಳ ಅಗ್ನಿಶಾಮಕ ದಳದ ಠಾಣಾಧಿಕಾರಿ ಚಂದ್ರಶೇಖರ್, ರೂಪೇಶ್, ಹರಿಪ್ರಸಾದ್, ಶ್ರೀಧರ್, ಮುಝಾಬಿಲ್, ಭೀಮಪ್ಪ, ದಿನೇಶ್, ಗಣೇಶ್ ಬಸವರಾಜ ಪಾಲ್ಗೊಂಡು ಹಗಲು ರಾತ್ರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿ ದುರಂತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net