ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆ ಹಿಂಭಾಗ ಹಾಗೂ ಅದಕ್ಕೆ ಹೊಂದಿಕೊಂಡಿದ್ದ ಸ್ನಾನಗೃಹ, ಕೊಟ್ಟಿಗೆಗೆ ಬೆಂಕಿ ಹೊತ್ತಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಭಾನುವಾರ ಸಂಭವಿಸಿದೆ.
ಸ್ಥಳೀಯ ನಿವಾಸಿಗಳು ಕೊಟ್ಟಿಗೆಯೊಳಗಿದ್ದ ದನಗಳನ್ನು ಹೊರಗೆ ಕರೆತಂದಿದ್ದರಿಂದ ಜಾನುವಾರುಗಳಿಗೆ ಅಪಾಯ ಸಂಭವಿಸಿಲ್ಲ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಬೆಂಕಿ ನಿಯಂತ್ರಣಕ್ಕೆ ತಂದರು. 4 ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ.