ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

drown
drown
Published on

ಕುಂದಾಪುರ: ಮೀನುಗಾರಿಕೆ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭ ಮರವಂತೆಯಲ್ಲಿ ಗುರುವಾರ ಬೆಳಗ್ಗೆ ಆಯತಪ್ಪಿ ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮರವಂತೆ ಕುಪ್ಪನಮನೆ ನಿವಾಸಿ ಪರಮಜ್ಯೋತಿ(43) ಎಂಬುವರು ಮೃತಪಟ್ಟಿದ್ದಾರೆ.

ಮರವಂತೆಯ ಪ್ರದೀಪ್ ಖಾರ್ವಿ ಎಂಬುವರ ಧರ್ಮದೇವತೆ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಅವರು, ಮೀನುಗಾರಿಕೆ ಮುಗಿಸಿ ವಾಪಸಾಗುವಾಗ ಸಮುದ್ರದಲ್ಲಿ ಜೋರಾಗಿ ಗಾಳಿ ಬೀಸಿದ ಕಾರಣ ದೋಣಿ ನೀರಿನಲ್ಲಿ ತೇಲಾಡಿದೆ. ಆಯತಪ್ಪಿ ದೋಣಿಯಿಂದ ಸಮುದ್ರಕ್ಕೆ ಬಿದ್ದಿದ್ದಾರೆ.

ಕೂಡಲೇ ಅವರನ್ನು ದೋಣಿಯಲ್ಲಿದ್ದ ಕೆಲಸಗಾರರು ನೀರಿನಿಂದ ಮೇಲಕ್ಕೆತ್ತಿ ಚಿಕಿತ್ಸೆಗಾಗಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net