

ಮೂಲ್ಕಿ: ಕೊಲ್ನಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಪಲ್ಟಿಯಾಗಿ ಹಣ್ಣು ಮಾರಾಟದ ಮಿನಿ ಗೂಡ್ಸ್ ಟೆಂಪೋಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಕಾರಿನಲ್ಲಿದ್ದ ಮೂರು ಮಂದಿ, ಟೆಂಪೋದಲ್ಲಿದ್ದ ಇಬ್ಬರು ಸೇರಿ ಐವರು ಗಂಭೀರ ಗಾಯಗೊಂಡಿದ್ದಾರೆ
ಬೆಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಕೋಲ್ನಾಡ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಮಿನಿ ಗೂಡ್ಸ್ ಟೆಂಪೋಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿ ಚರಂಡಿಗೆ ಬಿದ್ದಿದ್ದು, ಟೆಂಪೋದ ಮೇಲ್ಭಾಗ ಕತ್ತರಿಸಲ್ಪಟ್ಟು ಹೆದ್ದಾರಿ ಡಿವೈಡರ್ ಮೇಲೆ ಬಿದ್ದಿದೆ. ಕಾರಿನೊಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಸ್ಥಳೀಯರು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ವ್ಯತ್ಯಯ ಉಂಟಾಯಿತು. ಕ್ರೇನ್ ಮೂಲಕ ಕಾರನ್ನು ಸ್ಥಳದಿಂದ ತೆರವುಗೊಳಿಸಲಾಯಿತು.