ವಿದ್ಯುತ್ ತಂತಿ ಮೇಲ್ಭಾಗದಲ್ಲಿ ಆಕೇಶಿಯಾ ಮರಗಳ ರೆಂಬೆ ಕೊಂಬೆಗಳು ಬಾಗಿಕೊಂಡಿದ್ದು, ಅನಾಹುತ ಸಂಭವಿಸುವ ಸಾಧ್ಯತೆ ಇದೆ ಎಂದು ಸಮಿತಿ ಸದಸ್ಯರಾದ ವಸುಂಧರ ಹೆಗ್ಡೆ ಹಾಗೂ ಚಂದ್ರ ಅಮೀನ್ ಅಸವಾಧಾನ ವ್ಯಕ್ತಪಡಿಸಿದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ರಿಯಿಸಿ, ಮುಂದಿನ ಸಭೆಗೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಕರೆಸುವುದಾಗಿ ತಿಳಿಸಿದರು. ಮೆಸ್ಕಾಂ ಅಧಿಕಾರಿಗಳು ವಾತನಾಡಿ, ಈಗಾಗಲೇ ಅಪಾಯಕಾರಿ ಮರಗಳು ಇರುವ ಸ್ಥಳಗಳ ಪಟ್ಟಿ ವಾಡಿದ್ದೇವೆ. ಲಿಖಿತವಾಗಿ ಆರ್.ಎಫ್.ಒ. ಗಮನಕ್ಕೂ ತಂದಿದ್ದೇವೆ ಎಂದರು.