ಸೇಂಟ್​ ಮೇರೀಸ್​ ಐಲ್ಯಾಂಡ್​ನಲ್ಲಿ ಧ್ವಜಾರೋಹಣ

ಲಕ್ಷಿ$್ಮ ಹೆಬ್ಬಾಳಕರ್​ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
ಲಕ್ಷಿ$್ಮ ಹೆಬ್ಬಾಳಕರ್​ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
Published on
ಉಡುಪಿ: ಸೈಂಟ್​ ಮೇರಿಸ್​ ಸೇರಿದಂತೆ ರಾಜ್ಯದಲ್ಲಿರುವ 116 ಐಲ್ಯಾಂಡ್​ಗಳೂ ರ್ನಿಲಕ್ಷ್ಯಕ್ಕೊಳಗಾಗಿದೆ. ಇಂತಹ ಅತ್ಯದ್ಭುತ ಸಂಪನ್ಮೂಲಗಳಿದ್ದರೂ ಪ್ರವಾಸೋದ್ಯಮದ ದೃಷ್ಟಿಯಿಂದ ಬಳಸಿಕೊಳ್ಳಲು ವಿಫಲರಾಗಿದ್ದೇವೆ. ಹೀಗಾಗಿ ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ರಾಜ್ಯ ಸರ್ಕಾರ ಉತ್ಸುಕವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ$್ಮ ಹೆಬ್ಬಾಳಕರ್​ ಹೇಳಿದ್ದಾರೆ.
ಸೇಂಟ್​ ಮೇರೀಸ್​ ಐಲ್ಯಾಂಡ್​ ನಲ್ಲಿ ಸೋಮವಾರ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕರ್ನಾಟಕದ ಅತೀ ದೊಡ್ಡ ಐಲ್ಯಾಂಡ್​ ಎನ್ನುವ ಹೆಮ್ಮೆಗೆ ಕೂಡ ಪಾತ್ರವಾಗಿರುವ ಸೇಂಟ್​ ಮೇರೀಸ್​ ಐಲ್ಯಾಂಡ್​ನಲ್ಲಿ ಧ್ವಜಾರೋಹಣ ನೆರವೇರಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಮೊಟ್ಟ ಮೊದಲ ಬಾರಿಗೆ ಕರಾವಳಿ ಕಾವಲು ಪಡೆಯ 11 ಬೋಟ್​ ಗಳನ್ನು ಇನಸ್ಪೆಕ್ಷನ್​ ಮಾಡಿದೆ. ಇದು ನನಗೆ ಬಹಳ ರೋಮಾಂಚಕಾರಿ ಅನುಭವವಾಗಿದೆ ಎಂದರು.

ಕರಾವಳಿ ಕಾವಲುಪಡೆಯ ಪೊಲೀಸರು, ಉದ್ಯೋಗದ ಜೊತೆಗೆ ರಾಷ್ಟ್ರ ರಕ್ಷಣೆಯಲ್ಲೂ ಮಾಹಿತಿದಾರರಾಗಿ ಕೆಲಸ ಮಾಡುತ್ತಿರುವ ಮೀನುಗಾರರು, ಬೀಚ್​ ಸ್ವಚ್ಛತೆಗೆಂದು ಬಂದಿರುವ ಸ್ವಯಂ ಸೇವಕರು, ಕರಾವಳಿ ನಾವಿಕ ದಳದ ಸಿಬ್ಬಂದಿ, ದೇಶದ ಸುರಕ್ಷತೆಗಾಗಿ ಮತ್ತು ಜನರ ಸುರಕ್ಷತೆಗಾಗಿ ಜೀವವನ್ನೇ ಪಣಕ್ಕಿಟ್ಟು ಹಗಲು -ರಾತ್ರಿ ಕೆಲಸ ಮಾಡುತ್ತಿದ್ದು, ನಿಜವಾದ ದೇಶಭಕ್ತರು, ನಿಜವಾದ ಹೀರೋಗಳಾಗಿದ್ದಾರೆ ಎಂದು ಹೇಳಿದರು.

ವಿಧಾನ ಪರಿಷತ್​ ಸದಸ್ಯ ಚನ್ನರಾಜ್​ ಹಟ್ಟಿಹೊಳಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್​, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯಿತಿ ಸಿಇಓ ಪ್ರತಿಕ್​ ಬಾಯಲ್​, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹರಿರಾಮ್​ ಶಂಕರ್​ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net