ಉಡುಪಿ: ಕಾರಿಗೆ ಅಡ್ಡನಿಂತು ಗಲಾಟೆ ಮಾಡಿದ್ದಲ್ಲದೆ, ಬಳಿಕ ವಾಹನವನ್ನು ಹಿಂಬಾಲಿಸಿಕೊಂಡು ಬಂದು ಸೋಡಾ ಬಾಟಲಿಯಿಂದ ಭೀಕರವಾಗಿ ಹಲ್ಲೆ ನಡೆಸಿದ ಘಟನೆ ಪೆರ್ಡೂರು ಪೇಟೆ ಬಸ್ ನಿಲ್ದಾಣದ ಬಳಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ನಾಲ್ವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.