ಉಡುಪಿ ಪರ್ಯಾಯ, 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ

ಉಡುಪಿ ಶಿರೂರು ಮಠದ ಪರ್ಯಾಯದ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಬೆಳಗಾವಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿಡಿಯೋ ಸಂವಾದ ನಡೆಸಿದರು.
ಉಡುಪಿ ಶಿರೂರು ಮಠದ ಪರ್ಯಾಯದ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಬೆಳಗಾವಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿಡಿಯೋ ಸಂವಾದ ನಡೆಸಿದರು.
Published on

* ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸೂಚನೆ

* ಶಾಸಕರು, ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ

ಉಡುಪಿ: ಉಡುಪಿ ಶಿರೂರು ಮಠದ ಪರ್ಯಾಯದ ಹಿನ್ನೆಲೆಯಲ್ಲಿ ಅಂದಾಜು 6 ಕೋಟಿ ರೂ. ವೆಚ್ಚದಲ್ಲಿ ಅಗತ್ಯವಿರುವ ಎಲ್ಲ ಮೂಲ ಸೌಕರ್ಯ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ಸೂಚನೆ ನೀಡಿದರು.
ಬೆಳಗಾವಿಯಿಂದಲೇ ಉಡುಪಿ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಮಂಗಳವಾರ (ಜ.6) ವಿಡಿಯೋ ಸಂವಾದದ ಮೂಲಕ ಮಾರ್ಗದರ್ಶನ ನೀಡಿದರು.
ಪರ್ಯಾಯ ಮಹೋತ್ಸವ ಸುಗಮವಾಗಿ ನಡೆಯಲು ನಗರ ಭಾಗದ ರಸ್ತೆಯ ಅಭಿವೃದ್ಧಿ ಸೇರಿದಂತೆ ಅತ್ಯವಶ್ಯಕತೆ ಇರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಾಗೂ ಹಗಲು-ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಸಚಿವೆ ಲಕ್ಷ್ಮೀ ನಿರ್ದೇಶನ ನೀಡಿದರು.
ವಿಡಿಯೋ ಸಂವಾದದಲ್ಲಿ ಕಾರ್ಕಳ ಶಾಸಕ ಸುನೀಲ್​ಕುಮಾರ್​, ಕುಂದಾಪುರ ಶಾಸಕ ಕಿರಣಕುಮಾರ್​ ಕೊಡ್ಗಿ, ಬೈಂದೂರು ಶಾಸಕ ಗುರುರಾಜ ಗಂಟಿಹೊಳಿ, ಕಾಪು ಶಾಸಕ ಗುರ್ಮೆ ಸುರೇಶ್​ ಶೆಟ್ಟಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net