ವಿಷ್ಣುಮೂರ್ತಿ ದೇಗುಲ ಜೀರ್ಣೋದ್ಧಾರಕ್ಕೆ ಮುಷ್ಠಿ ಕಾಣಿಕೆ

ಉಡುಪಿ ತಾಲೂಕಿನ ಹಿರಿಯಡ್ಕದಲ್ಲಿರುವ ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರಕ್ಕಾಗಿ ಸುಗುಣೇಂದ್ರ ಶ್ರೀಗಳು ಮುಷ್ಠಿ ಕಾಣಿಕೆ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿದರು. ಸುಶ್ರೀಂದ್ರ ಶ್ರೀ ಹಾಗೂ ದೇಗುಲದ ವಿವಿಧ ಪದಾಧಿಕಾರಿಗಳು ಇದ್ದರು.

Published on

* ಪುತ್ತಿಗೆ ಸುಗುಣೇಂದ್ರ ಶ್ರೀ ಚಾಲನೆ

ಉಡುಪಿ: ಹಿರಿಯಡ್ಕದಲ್ಲಿರುವ ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪಟ್ಟದ ಕಿರಿಯ ಶಿಷ್ಯ ಸುಶ್ರೀಂದ್ರ ತೀರ್ಥ ಶ್ರೀಪಾದರು ಮುಷ್ಠಿ ಕಾಣಿಕೆ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿದರು.
ಇದಕ್ಕೂ ಮೊದಲು ಉಭಯ ಶ್ರೀಪಾದರನ್ನು ಭವ್ಯ ಮೆರವಣಿಗೆಯ ಮೂಲಕ ಪುತ್ತಿಗೆ ಮೂಲ ಮಠದಿಂದ ದೇವಾಲಯಕ್ಕೆ ಕರೆತಂದು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಬಳಿಕ  ಸಾಮೂಹಿಕ ಪ್ರಾರ್ಥನೆ, ಗಣಹೋಮ ನೆರವೇರಿತು.
ದೇಗುಲದ ಜೀರ್ಣೋದ್ಧಾರಕ್ಕೆ ಶ್ರೀಪಾದರು ಮುಷ್ಠಿ ಕಾಣಿಕೆ ಸಮರ್ಪಿಸಿದರು. ಬಳಿಕ ಭಕ್ತರು ಸಮರ್ಪಿಸಿದರು. ಚತುರ್ಥ 'ವಿಶ್ವಗೀತಾ' ಪರ್ಯಾಯವನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಿದ ಸುಗುಣೇಂದ್ರ ಶ್ರೀ ಹಾಗೂ ಸುಶ್ರೀಂದ್ರ ಶ್ರೀಗಳಿಗೆ ಇದೇ ಸಂದರ್ಭದಲ್ಲಿ ಸ್ಥಳೀಯ ಭಕ್ತ ವೃಂದದ ವತಿಯಿಂದ ಅಭಿನಂದನಾ ಸಮಾರಂಭ ಏರ್ಪಡಿಸಿ ಗೌರವಿಸಲಾಯಿತು.
ಮಠದ ದಿವಾನ ನಾಗರಾಜ್​ ಆಚಾರ್ಯ, ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಶ್ರೀಗಳ ಆಪ್ತ ಕಾರ್ಯದರ್ಶಿ ರತೀಶ್​ ತಂತ್ರಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net