ಉಡುಪಿ ಹಾಗೂ ಮಂಗಳೂರು ಜಿಲ್ಲೆ ವ್ಯಾಪ್ತಿಯ ಪುತ್ತೂರು, ಹೆಬ್ರಿ, ಸುಳ್ಯ, ಉಪ್ಪಿನಂಗಡಿ, ಬೆಳ್ತಂಗಡಿ, ವೇಣೂರು, ಕಾರ್ಕಳ ಮೊದಲಾದ ಕಡೆಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷದ ಪ್ರಕರಣ ಕಂಡುಬರುತ್ತಿದೆ. ಅದನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಚಿವ ಖಂಡ್ರೆ ಸೂಚಿಸಿದರು. ಶಂಕರನಾರಾಯಣ ವಲಯ ಹೆನ್ನಬಯಲು ವ್ಯಾಪ್ತಿಯಲ್ಲಿ ಚಿರತೆಯೊಂದನ್ನು ಕೊಂದು ಅದರ ಕಾಲುಗಳನ್ನು ಕತ್ತರಿಸಿಕೊಂಡು ಹೋಗಿದ್ದ ದುಷ್ಕರ್ಮಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯ ಸೇವೆಗೆ ಸಚಿವ ಈಶ್ವರ ಖಂಡ್ರೆ ಮೆಚ್ಚುಗೆ ವ್ಯಕ್ತಪಡಿಸಿದರು.