ಮಾಜಿ ಸಚಿವ ರಮಾನಾಥ ರೈ ಕಾರು ಅಪಘಾತ

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಹಾಗೂ ಖಾಸಗಿ ಬಸ್​ ನಡುವೆ ಅಫಘಾತ.
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಹಾಗೂ ಖಾಸಗಿ ಬಸ್​ ನಡುವೆ ಅಫಘಾತ.
Published on
ಉಡುಪಿ: ಸಾಣೂರು ಗ್ರಾಮದ ಬಳಿ ಕಾರ್ಕಳ-ಮೂಡುಬಿದಿರೆ ರಸ್ತೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಹಾಗೂ ಖಾಸಗಿ ಬಸ್​ ನಡುವೆ ಅಫಘಾತ ಸಂಭವಿಸಿದ್ದು, ಆಪ್ತ ಸಹಾಯಕ ಗಂಭೀರಗಾಯಗೊಂಡಿದ್ದಾರೆ.

ಭಾನುವಾರ ಮಧ್ಯಾಹ್ನ ರಮಾನಾಥ ರೈ ಅವರು ತಮ್ಮ ಇನ್ನೋವಾ ಕಾರಿನಲ್ಲಿ ತಮ್ಮ ಆಪ್ತ ಸಹಾಯಕ ಡೆನ್ಜಿಲ್​, ಹಾಗೂ ಗನ್​ ಮ್ಯಾನ್​ ಜೊತೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಪಿಎ ಡೆನ್ಜೆಲ್​ ಅವರ ಬಲಗಾಲು ಮುರಿದಿದ್ದು, ಚಿಕಿತ್ಸೆಗಾಗಿ ಕಾರ್ಕಳದ ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರಿನ ಯೇನಪೋಯಾ ಸ್ಪೆಶಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಘಟನೆಯಲ್ಲಿ ರಮಾನಾಥ ರೈ ಹಾಗೂ ಗನ್​ ಮ್ಯಾನ್​ ಮತ್ತು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕಾರ್ಕಳ ನಗರ ಪೊಲೀಸ್​ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net