ಧರಣಿ ಎರಡನೇ ದಿನಕ್ಕೆ ಕಾಲಿಡುತ್ತಿದ್ದಂತೆಯೇ ನಗರಾಭಿವೃದ್ಧಿ ಪ್ರಾಧಿಕಾರ ಏಕವಿನ್ಯಾಸ ನಕ್ಷೆ ಮಂಜೂರು ಮಾಡಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಮಾಜಿ ಶಾಸಕ ರಘುಪತಿ ಭಟ್, ಎರಡು ವರ್ಫಿಗಳಿಂದ ಬಾಕಿ ಇದ್ದ ಕೆಲಸ ಹೋರಾಟದಿಂದಾಗಿ ಆಗಿದೆ. ಕಾನೂನುಪ್ರಕಾರ ಅರ್ಜಿ ಸಲ್ಲಿಸಿದ್ದೆ. ಇವತ್ತು ಹೋರಾಟಕ್ಕೆ ಜಯ ಸಿಕ್ಕಿದೆ. ಮೂರು ತಿಂಗಳಲ್ಲಿ ನೀಡಬೇಕಾದ ಅನುಮತಿ ಎರಡು ವರ್ಷದ ನಂತರ ನೀಡಿದ್ದಾರೆ. ಕಾನೂನು ಸಲಹೆಗಾರರಿಂದ ಅಭಿಪ್ರಾಯ ಪಡೆದು ಅನುಮತಿ ಕೊಟ್ಟಿದ್ದಾರೆ ಎಂದು ತಿಳಿಸಿದರು.