

ಹೆಬ್ರಿ: ಮಹಾನಾಯಕರು ಮತ್ತು ಲಕ್ಷಾಂತರ ಮಂದಿಯ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದೊರಕಿದೆ. ಪ್ರತಿಯೊಬ್ಬ ಭಾರತೀಯರ ಪಾಲಿಗೂ ಇಂದು ಪವಿತ್ರ ದಿನವಾಗಿದ್ದು, ನಾವೆಲ್ಲರೂ ಮಹಾನ್ ನಾಯಕರನ್ನು ಸ್ಮರಿಸಬೇಕಾಗಿದೆ ಎಂದು ಹೆಬ್ರಿ ತಹಸೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರೀಟ್ಟೋ ಹೇಳಿದರು.
ಹೆಬ್ರಿ ತಾಲೂಕು ಆಡಳಿತ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.