ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಗಾಂಗ ದಾನ ಮತ್ತು ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ನಡೆಯಿತು. ಪ್ರಮುಖರಾದ ಪ್ರೀತಿ ಶೆಟ್ಟಿ, ಡಾ.ಅಖಿಲ್ ಪಾಲೋಡ್, ಡಾ.ಶುಭಕರಾಚಾರಿ, ಪ್ರೊ.ಸತ್ಯನಾರಾಯಣ, ಸತ್ಯನಾರಾಯಣ ಪುರಾಣಿಕ್, ವಿದ್ಯಾರಾಣಿ ಉಪಸ್ಥಿತರಿದ್ದರು.
ಕುಂದಾಪುರ: ಬದುಕಿರುವಾಗ ಕೆಲವು ಅಂಗಾಂಗ ದಾನ ಮಾಡಬಹುದು. ದೇಹದಾನ ಶ್ರೇಷ್ಠ ದಾನ. ಅಂಗ ದಾನ ಮಾಡುವುದರಿಂದ ಇನ್ನೊಬ್ಬರಿಗೆ ನೀವು ಬದುಕು ನೀಡಿದ ಪುಣ್ಯ ಸಲ್ಲುತ್ತದೆ ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಅಂಗಾಂಗ ಕಸಿ ವಿಭಾಗದ ಸಂಯೋಜಕಿ ಪ್ರೀತಿ ಶೆಟ್ಟಿ ಹೇಳಿದರು.
ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶುಕ್ರವಾರ ಅಂಗಾಂಗ ದಾನ ಮತ್ತು ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮದಲ್ಲಿ ದೇಹದಾನದ ಮಹತ್ವ, ದೇಹದಾನದ ಕುರಿತ ಕಾನೂನುಗಳು ಮತ್ತು ಪ್ರಕ್ರಿಯೆಗಳ ಕುರಿತು ಮಾತನಾಡಿದರು.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಸರ್ಜಿಕಲ್ ಅಂಕೋಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಅಖಿಲ್ ಪಾಲೋಡ್ ಕ್ಯಾನ್ಸರ್ ಜಾಗೃತಿ ಕುರಿತು ಮಾತನಾಡಿದರು. ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಸತ್ಯನಾರಾಯಣ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ಭಂಡಾರ್ಕಾರ್ಸ್ ಕಾಲೇಜಿನ ಯೂತ್ ರೆಡ್‌ಕ್ರಾಸ್ ಘಟಕದ ಸಂಯೋಜಕಿ ವಿದ್ಯಾರಾಣಿ ಉಪಸ್ಥಿತರಿದ್ದರು.
ವೈಷ್ಣವಿ ಸ್ವಾಗತಿಸಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಚೇರ್ಮನ್ ಜಯಕರ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿನಿಯರಾದ ಅನಿಷಾ ಲೆವಿಟ್ ನಿರೂಪಿಸಿದರು. ಅದೀಬಾ ವಂದಿಸಿದರು.