ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್‌ನೊಳಗಿದ್ದ ಮಕ್ಕಳನ್ನು ಸುರಕ್ಷಿತವಾಗಿ ಹೊರಗೆ ತೆಗೆದಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಭಾರಿ ಮಳೆಯಿದ್ದ ಕಾರಣ ಮರ ಉರುಳಿ ಬಿದ್ದಿರುವುದಾಗಿ ತಿಳಿದು ಬಂದಿದೆ.