ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ

Crime
Crime
Published on
ಕುಂಬಳೆ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಕೊಡ್ಯಮ್ಮೆಯ ಖಲಂದರ್ ಶಾನಿ(26) ಎಂಬಾತನ ವಿರುದ್ಧ ಕುಂಬಳೆ ಪೋಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
16ರ ಹರೆಯದ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಎಂದು ದೂರು ನೀಡಲಾಗಿತ್ತು. ಈ ಮೊದಲು 16ರ ಹರೆಯದ ಇನ್ನೊರ್ವ ಬಾಲಕಿಗೆ ಫೋನ್‌ನಲ್ಲಿ ಸಂದೇಶ ಕಳುಹಿಸಿ ಕಿರುಕುಳ ನೀಡಲೆತ್ನಿಸಿದ ಆರೋಪದ ಮೇಲೆ ಖಲಂದರ್ ಶಾನಿ ವಿರುದ್ಧ ಕೇಸು ದಾಖಲಾಗಿತ್ತು. ಆತನ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿರುವಾಗಲೇ ಇನ್ನೊಂದು ದೂರು ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net