ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮಾತನಾಡಿದರು. ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷ ನಾರಾಯಣ ಕುಂಪಲ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ, ಪ್ರಮುಖರಾದ ಬೊಲ್ಯಗುತ್ತು ವಿನೋದ್ ಶೆಟ್ಟಿ, ರತ್ನಾಕರ ಕಾವ ಕುತ್ತಾರುಗುತ್ತು, ದೇವಿಪ್ರಸಾದ್ ಶೆಟ್ಟಿ ಮಾಗಣತ್ತಡಿ, ವಿಹಿಂಪ ಸಹ ಸೇವಾ ಪ್ರಮುಖರಾದ ಗೋಪಾಲ ಕುತ್ತಾರು, ವಿಹಿಂಪ ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಭುಜಂಗ ಕುಲಾಲ್, ವಿಹಿಂಪ ಸಹಕಾರ್ಯದರ್ಶಿ ಶಿವಾನಂದ ಮೆಂಡನ್ ಮೊದಲಾದವರು ಉಪಸ್ಥಿತರಿದ್ದರು. ನಮ್ಮ ನಡೆ ಆಯೋಜನಾ ಸಮಿತಿಯ ಅಧ್ಯಕ್ಷ ಪ್ರವೀಣ್ ಕುತ್ತಾರ್ ಸ್ವಾಗತಿಸಿದರು. ಪ್ರವೀಣ್ ಬಸ್ತಿ ವಂದಿಸಿದರು. ಆಶಿಕ್ ಗೋಪಾಲಕೃಷ್ಣ ನಿರೂಪಿಸಿದರು.