ಒಳ್ಳೆಯ ಪ್ರಜೆಯಾಗಲು ಅಗತ್ಯ ಉತ್ತಮ ಜ್ಞಾನ

 ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವತಿಯಿಂದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಮುಖರಾದ ಕೆ.ಜಯಪ್ರಕಾಶ್ ಹೆಗ್ಡೆ, ಕೆ.ರಾಮಕೃಷ್ಣ ಕಾಮತ್, ಡಾ.ಕೆ.ಉಮೇಶ್ ಶೆಟ್ಟಿ ಮೊದಲಾದವರಿದ್ದರು.
ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವತಿಯಿಂದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಮುಖರಾದ ಕೆ.ಜಯಪ್ರಕಾಶ್ ಹೆಗ್ಡೆ, ಕೆ.ರಾಮಕೃಷ್ಣ ಕಾಮತ್, ಡಾ.ಕೆ.ಉಮೇಶ್ ಶೆಟ್ಟಿ ಮೊದಲಾದವರಿದ್ದರು.
Published on
ಕುಂದಾಪುರ: ಶಿಕ್ಷಣ ನಾಗರಿಕತೆಯ ಬೆಳವಣಿಗೆಗೆ ದಾರಿ. ಉತ್ತಮ ಜ್ಞಾನದಿಂದ ಒಳ್ಳೆಯ ಪ್ರಜೆಗಳಾಗಲು ಸಾಧ್ಯ. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ. ನಿರಂತರ ಪ್ರಯತ್ನ, ಪರಿಶ್ರಮದಿಂದ ವಾತ್ರ ಯಶಸ್ಸು ಸಾಧ್ಯ ಎಂದು ವಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವತಿಯಿಂದ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ‌್ಯಾಂಕ್ ಪಡೆದ ಕಾಲೇಜಿನ ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಸನ್ಮಾನಿಸಿ ವಾತನಾಡಿದರು.
ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ ಆ್ಯಂಡ್ ಕಲ್ಚರಲ್ ಟ್ರಸ್ಟ್ ಅಧ್ಯಕ್ಷ ಕೆ.ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಉಮೇಶ್ ಶೆಟ್ಟಿ ಶುಭಾಶಂಸನೆಗೈದರು. ಪಾಲಕರಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಓರಿಯೆಂಟೇಶನ್ ನಡೆಯಿತು.
ಟ್ರಸ್ಟ್‌ನ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ, ಖಜಾಂಚಿ ಕೆ.ಲಕ್ಷ್ಮೀನಾರಾಯಣ ಶೆಣೈ, ಶಾಲೆಯ ವಿವಿಧ ವಿಭಾಗಗಳ ಮುಖ್ಯ ಶಿಕ್ಷಕರಾದ ರೇಷ್ಮಾ ಡಿಸೋಜ, ಪ್ರಮೀಳಾ ಡಿಸೋಜ ಮತ್ತಿತರರಿದ್ದರು.
ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ ಪ್ರಸ್ತಾವಿಸಿದರು. ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್ ಸ್ವಾಗತಿಸಿದರು. ಉಪನ್ಯಾಸಕರಾದ ಅಮೃತಾ, ಮಂಜುನಾಥ ಸಾಧಕ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಸುಧೀರ್, ಸುಪ್ರೀತಾ ಪರಿಚಯಿಸಿದರು. ಸುನೀತಾ ಶೆಟ್ಟಿ ನಿರೂಪಿಸಿದರು. ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಭರತ್‌ಚಂದ್ರ ವಂದಿಸಿದರು.

ಮಕ್ಕಳ ಪರಿಶ್ರಮ, ಶಿಕ್ಷಕ ವೃಂದದವರ ಪ್ರಯತ್ನ, ಸಹಕಾರದಿಂದ ಇಂತಹ ಉತ್ತಮ ಫಲಿತಾಂಶ ಬರಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸ್ಥಾನಕ್ಕೇರುವಂತಾಗಲಿ.

— ಕೆ.ರಾಮಕೃಷ್ಣ ಕಾಮತ್ ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ ಆ್ಯಂಡ್ ಕಲ್ಚರಲ್ ಟ್ರಸ್ಟ್ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net