ಕೆಲವೇ ವ್ಯಕ್ತಿಗಳಿಗೆ ಸರ್ಕಾರದ ಯೋಜನೆ

 ಅಂಚೆ ಜನಸಂಪರ್ಕ ಅಭಿಯಾನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ ತಲಪಾಡಿ, ನಾರ್ಲತ್ತಾಯ ನಾಗಬ್ರಹ್ಮ ಸೇವಾ ಸಮಿತಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಮ್ತತಿತರರು ಉಪಸ್ಥಿತರಿದ್ದರು.
ಅಂಚೆ ಜನಸಂಪರ್ಕ ಅಭಿಯಾನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ ತಲಪಾಡಿ, ನಾರ್ಲತ್ತಾಯ ನಾಗಬ್ರಹ್ಮ ಸೇವಾ ಸಮಿತಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಮ್ತತಿತರರು ಉಪಸ್ಥಿತರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಉಳ್ಳಾಲ
ಮಗುವಿನ ಹುಟ್ಟಿನಿಂದ ಸಾವಿನವರೆಗೂ ಸರ್ಕಾರದ ವಿವಿಧ ಯೋಜನೆಗಳು ಇದೆ. ಆದರೆ ನಮ್ಮ ಅಸಡ್ಡೆಯಿಂದಾಗಿ ಕೆಲವೇ ವ್ಯಕ್ತಿಗಳಿಗೆ ತಲುಪುವಂತಾಗಿದೆ. ಪ್ರಸ್ತುತ ದಿನಗಳಲ್ಲಿ ದಾಖಲೆಗಳು ಸಮರ್ಪಕವಾಗಿ ಇಲ್ಲದಿದ್ದರೆ ಯಾವುದೇ ಯೋಜನೆ ಪಡೆಯಲಾಗದು ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಖೇದ ವ್ಯಕ್ತಪಡಿಸಿದರು.
ತಲಪಾಡಿ ನಾರ್ಲ ಶ್ರೀ ನಾರ್ಲತ್ತಾಯ ನಾಗಬ್ತಹ್ಮ ಸೇವಾ ಸಮಿತಿ ಹಾಗೂ ಮಹಿಳಾ ಮಂಡಳಿ, ಸ್ವಾಮಿ ಕೊರಗಜ್ಜ ಸೇವಾ ಸಮಿತಿ, ಸಂಗಮ್ ್ರೆಂಡ್ಸ್ ಹಾಗೂ ಮಹಿಳಾ ಮಂಡಳಿ, ನವಕೇಸರಿ ್ರೆಂಡ್ಸ್, ನವಕೇಸರಿ ಮಾತೃ ಮಂಡಳಿ, ಮಂಗಳೂರು ಭಾರತೀಯ ಅಂಚೆ ಇಲಾಖೆ ಆಶ್ರಯದಲ್ಲಿ ನಾರ್ಲ ಪಡೀಲ್ ಸರ್ಕಾರಿ ಶಾಲೆಯಲ್ಲಿ ಭಾನುವಾರ ನಡೆದ ‘ಅಂಚೆ ಜನಸಂಪರ್ಕ ಅಭಿಯಾನ’ ಉದ್ಘಾಟಿಸಿ ಮಾತನಾಡಿದರು.
ತಲಪಾಡಿ ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ್ ಆಳ್ವ ಸಾಂತ್ಯಗುತ್ತು ಮಾತನಾಡಿದರು. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ ನಾರ್ಲ, ಶ್ರೀ ನಾರ್ಲತ್ತಾಯ ನಾಗಬ್ರಹ್ಮ ಸೇವಾ ಸಮಿತಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕೂವೆತ್ತಬೈಲ್, ಸಂಗಮ್ ಫ್ರೆಂಡ್ಸ್ ಅಧ್ಯಕ್ಷ ಅಕ್ಷಯ ಶೆಟ್ಟಿ, ನವಕೇಸರಿ ್ರೆಂಡ್ಸ್ ಅಧ್ಯಕ್ಷ ನಿತಿನ್ ಪೂಜಾರಿ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ತಾಲೂಕು ಸಂಯೋಜಕ ಜಯಪ್ರಕಾಶ್ ತಚ್ಚಾಣಿ, ಅಂಚೆ ಇಲಾಖೆ ಮಂಗಳೂರು ವಿಭಾಗ ಮುಖ್ಯಸ್ಥ ಶಿವಪ್ರಸಾದ್, ಬಿಜೆಪಿ ಬೂತ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ನಿತ್ಯಾನಂದ ಶೆಟ್ಟಿ ನಾರ್ಲ ಹೊಸಮನೆ ಮತ್ತಿತರರು ಉಪಸ್ಥಿತರಿದ್ದರು. ನಾರ್ಲತ್ತಾಯ ನಾಗಬ್ರಹ್ಮ ಸೇವಾ ಸಮಿತಿ ಕಾರ್ಯದರ್ಶಿ ಸಂತೋಷ್ ಶೆಟ್ಟಿ ನಾರ್ಲ ಸ್ವಾಗತಿಸಿದರು. ಆಶಾಲತಾ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೇಘಶ್ರೀ ವಂದಿಸಿದರು. ಗೀತಾ ಶೆಟ್ಟಿ ನಿರೂಪಿಸಿದರು.

ಅಂಚೆ ಇಲಾಖೆಯ ಸೌಲಭ್ಯ ಪ್ರತಿಯೊಬ್ಬರಿಗೂ ತಲುಪಬೇಕು ಎನ್ನುವ ಉದ್ದೇಶದೊಂದಿಗೆ ಸಂಸದರ ಆಶಯದಂತೆ ಕಾರ್ಯಕ್ರಮ ನಡೆಸಲಾಗಿದೆ. ಗ್ರಾಮದ ಅಭಿವೃದ್ಧಿಗೆ ಇರುವ ಅನುದಾನ ಕೊರತೆ ಸಂಸದರು ನೀಗಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net