ಮುಖ್ಯ ಅತಿಥಿಗಳಾಗಿ ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ವೈ.ಸುಧೀರ್ ಕುಮಾರ್ ಮಾತನಾಡಿದರು. ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಹಾಗೂ ಕರ್ನಾಟಕ ಸಹಕಾರ ಸಂಘಗಳ ತರಬೇತಿದಾರ, ವಕೀಲ ಶ್ರೀಧರ್ ಪಿ.ಎಸ್. ಮೂಲ್ಕಿ ತಾಲೂಕುಮಟ್ಟದ ಸಹಕಾರ ಸಂಘಗಳ ನಿರ್ದೇಶಕರು, ಸಿಬ್ಬಂದಿಗೆ ಕಾರ್ಯಾಗಾರ ನಡೆಸಿಕೊಟ್ಟರು.