ಕೋಟ: ವಿದ್ಯಾರ್ಥಿಗಳು ಸಿಗುವ ಸಣ್ಣಪುಟ್ಟ ಅವಕಾಶಗಳನ್ನು ಬಳಸಿಕೊಂಡು ಬೆಳೆದಾಗ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ರೇಡಿಯೋ ಕುಂದಾಪುರ ಕಾರ್ಯನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಹೇಳಿದರು.
ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆ ಮತ್ತು ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಹಳೇ ವಿದ್ಯಾರ್ಥಿ ಶ್ರೀಲತಾ ಅಡಿಗ ವಿದ್ಯಾರ್ಥಿ ಜೀವನದಲ್ಲಿ ತಾನು ಬಳಸಿಕೊಂಡ ಅವಕಾಶಗಳ ಬಗ್ಗೆ ಹಂಚಿಕೊಂಡರು. ಕೋಟ ವಿದ್ಯಾ ಸಂಘದ ಅಧ್ಯಕ್ಷ ಸಿಎ ಪ್ರಭಾಕರ ಮಯ್ಯ ಅಧ್ಯಕ್ಷತೆ ವಹಿಸಿದ್ದರು. ಜ್ಯೋತಿ ಸಾಲಿಗ್ರಾಮ, ಶ್ರೀಲತಾ ಅಡಿಗ ಅವರನ್ನು ಸನ್ಮಾನಿಸಲಾಯಿತು.
ಕೋಟ ವಿದ್ಯಾಸಂಘದ ಕಾರ್ಯದರ್ಶಿ ಎಂ.ರಾಮದೇವ ಐತಾಳ್ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚೇಂಪಿ ರಮಾನಂದ ಭಟ್, ಪ್ರಾಂಶುಪಾಲ ಜಗದೀಶ್ ನಾವಡ, ಹಿರಿಯ ಶಿಕ್ಷಕ ಪ್ರೇಮಾನಂದ ಉಪಸ್ಥಿತರಿದ್ದರು.
ಬಾಲಕಿಯರ ಪ್ರೌಢಶಾಲೆ ಮುಖ್ಯ ಶಿಕ್ಷಕ ವೆಂಕಟೇಶ ಉಡುಪ ಸ್ವಾಗತಿಸಿದರು. ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯಶಿಕ್ಷಕಿ ಪ್ರೀತಿ ರೇಖಾ ವಂದಿಸಿದರು. ಹಿರಿಯ ಶಿಕ್ಷಕ ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು.