ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡುವಲ್ಲಿ ಹಾಗೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ರಾಜ್ಯಾದ್ಯಂತ ಸಾವಿರಾರು ಅತಿಥಿ ಶಿಕ್ಷಕರು ಮಹತ್ವದ ಪಾತ್ರ ನಿಭಾಯಿಸುತ್ತಿದ್ದಾರೆ. ಆದರೆ, ಪ್ರಸ್ತುತ ದಿನಕ್ಕೆ 400 ರೂ.ನಂತೆ ತಿಂಗಳಿಗೆ ಕೇವಲ 12 ಸಾವಿರ ರೂ. ವೇತನ ನೀಡಲಾಗುತ್ತಿದೆ. ಇದು ಇಂದಿನ ದಿನದಲ್ಲಿ ಜೀವನ ನಿರ್ವಹಣೆ ಮಾಡಲು ಸಾಧ್ಯವೇ? ಅಲ್ಲದೆ, ಹಲವು ತಿಂಗಳ ವೇತನವೂ ಪಾವತಿಯಾಗಿಲ್ಲ. ಹೀಗಾಗಿ ಅವರ ಕುಟುಂಬಗಳ ಆರ್ಥಿಕ ಪರಿಸ್ಥಿತಿಯ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ತಿಳಿಸಿದ್ದಾರೆ.