ಬಡಗುತಿಟ್ಟು ಯಕ್ಷಗಾನದ ಖ್ಯಾತ ಸ್ತ್ರೀ ವೇಷಧಾರಿ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ.
Published on:
Copied
Follow Us
* ಖ್ಯಾತ ಸ್ತ್ರೀ ವೇಷಧಾರಿ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪಗೆ ಪುರಸ್ಕಾರ
ಉಡುಪಿ: ಯಕ್ಷಗಾನ ಕೇಂದ್ರ ಇಂದ್ರಾಳಿ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಹಾಗೂ ಉಜ್ವಲ್ ಡೆವಲಪರ್ಸ್ ಉಡುಪಿ ಸಹಯೋಗದಲ್ಲಿ ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ (ರಿ.) ಪ್ರಾಯೋಜಿತ ಗುರು ಮಟಪಾಡಿ ವೀರಭದ್ರ ನಾಯಕ್ ಸ್ಮಾರಕ 'ಯಕ್ಷ ಸಾಧಕ' ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆ.1ರಂದು ಸಂಜೆ 4 ಗಂಟೆಗೆ ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ.
ಬಡಗುತಿಟ್ಟು ಯಕ್ಷಗಾನದ ಖ್ಯಾತ ಸ್ತ್ರೀ ವೇಷಧಾರಿ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಅವರಿಗೆ 25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಪ್ರದಾನ ಮಾಡಲಿದ್ದಾರೆ.
ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ನಾಡೋಜ ಡಾ. ಜಿ.ಶಂಕರ್, ಉಜ್ವಲ್ ಡೆವೆಲಪರ್ಸ್ನ ಪ್ರವರ್ತಕ ಪುರುಷೋತ್ತಮ್ ಶೆಟ್ಟಿ, ಯಕ್ಷಗಾನ ಕೇಂದ್ರ ಇಂದ್ರಾಳಿಯ ಸಲಹಾ ಸಮಿತಿ ಅಧ್ಯಕ್ಷ ಪಳ್ಳಿ ಕಿಶನ್ ಹೆಗ್ಡೆ, ಯಕ್ಷಗಾನ ಮೇಳಗಳ ಯಜಮಾನ ವೈ. ಕರುಣಾಕರ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ಪ್ರಸಿದ್ಧ ಕಲಾವಿದರ ಒಗ್ಗೂಡುವಿಕೆಯಲ್ಲಿ 'ತಾಮ್ರಧ್ವಜ ಕಾಳಗ' ಯಕ್ಷಗಾನ ಪ್ರಸಂಗ ಪ್ರದರ್ಶನಗೊಳ್ಳಲಿದೆ ಎಂದು ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.