ಕಳೆದ ಎಂಟನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯ 2,00,518 ಜಾನುವಾರುಗಳಲ್ಲಿ 1,92,434 ಜಾನುವಾರುಗಳಿಗೆ ಲಸಿಕೆ ಹಾಕಿಸಿ ಶೇ. 96 ರಷ್ಟು ಪ್ರಗತಿ ಸಾಧಿಸಲಾಗಿದೆ. ಒಂಭತ್ತನೇ ಸುತ್ತಿಗೆ 1,96,905 ಗುರಿ ನಿಗದಿಪಡಿಸಿದ್ದು, ಈವರೆಗೆ 68,840 ಜಾನುವಾರುಗಳಿಗೆ ಲಸಿಕೆ ಹಾಕುವುದರೊಂದಿಗೆ ಶೇ. 34.96 ರಷ್ಟು ಗುರಿ ಸಾಧಿಸಲಾಗಿದೆ. ಲಸಿಕಾ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 2,16,643 ಡೋಸ್ ಲಸಿಕೆಗಳು ಲಭ್ಯವಿದೆ ಎಂದರು.