ಯಕ್ಷಗಾನ ಪ್ರಸಂಗಕ್ಕಿದೆ ಮಹಾಕಾವ್ಯದ ಯೋಗ್ಯತೆ

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ ‘ವೀರ ತಪಸ್ವಿ ಪರಶುರಾಮ’ ಯಕ್ಷಗಾನ ಕೃತಿಯನ್ನು ಕಬ್ಬಿನಾಲೆ ವಸಂತ ಭಾರದ್ವಾಜ್ ಬಿಡುಗಡೆಗೊಳಿಸಿದರು. ಹಿರಿಯ ಪ್ರಸಂಗಕರ್ತ ಶ್ರೀಧರ ಡಿ.ಎಸ್, ಶ್ರೀ ಧರ್ಮಸ್ಥಳ ಮೇಳದ ಪ್ರಬಂಧಕ ಗಿರೀಶ್ ಹೆಗ್ಡೆ ಮೊದಲಾದವರಿದ್ದರು.
ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ ‘ವೀರ ತಪಸ್ವಿ ಪರಶುರಾಮ’ ಯಕ್ಷಗಾನ ಕೃತಿಯನ್ನು ಕಬ್ಬಿನಾಲೆ ವಸಂತ ಭಾರದ್ವಾಜ್ ಬಿಡುಗಡೆಗೊಳಿಸಿದರು. ಹಿರಿಯ ಪ್ರಸಂಗಕರ್ತ ಶ್ರೀಧರ ಡಿ.ಎಸ್, ಶ್ರೀ ಧರ್ಮಸ್ಥಳ ಮೇಳದ ಪ್ರಬಂಧಕ ಗಿರೀಶ್ ಹೆಗ್ಡೆ ಮೊದಲಾದವರಿದ್ದರು.
Published on
ಕಾಸರಗೋಡು: ಬಹುತೇಕ ಯಕ್ಷಗಾನ ಪ್ರಸಂಗಗಳು ಮಹಾಕಾವ್ಯದ ಯೋಗ್ಯತೆಯನ್ನು ಹೊಂದಿದ್ದು, ಯಕ್ಷಗಾನದ ಗೌರವ ಹೆಚ್ಚಲು ಕಾರಣವಾಗಿವೆ ಎಂದು ಹಿರಿಯ ಪ್ರಸಂಗಕರ್ತ, ಸಂಶೋಧಕ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ಹೇಳಿದರು.
ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಶ್ರೀ ಕೇಶವಾನಂದ ಭಾರತೀ ಸ್ಮತಿ ಮಂದಿರದಲ್ಲಿ ಯಕ್ಷಗಾನ ಪ್ರಸಂಗ ರಚನೆ ಕಮ್ಮಟ ಹಾಗೂ ಶ್ರೀಧರ ಡಿ.ಎಸ್. ಅವರ ವೀರ ತಪಸ್ವಿ ಪರಶುರಾಮ ಕಾದಂಬರಿ ಆಧಾರಿತ ಕಾಸರಗೋಡಿನ ಹಿರಿಯ ಪ್ರಸಂಗಕರ್ತ ಶೇಡಿಗುಮ್ಮೆ ವಾಸುದೇವ ಭಟ್ ರಚಿಸಿದ ‘ವೀರ ತಪಸ್ವಿ ಪರಶುರಾಮ’ ಯಕ್ಷಗಾನ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಹಿರಿಯ ಪ್ರಸಂಗಕರ್ತ ಶ್ರೀಧರ ಡಿ.ಎಸ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಶೇಡಿಗುಮ್ಮೆ ವಾಸುದೇವ ಭಟ್ ಯಕ್ಷಗಾನ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಮೂಲ್ಯ. ಬಿಡುಗಡೆಯಾಗಿರುವ ಹೊಸ ಕೃತಿ ಕೂಡ ಸುಂದರ ಪದ್ಯಗಳನ್ನು ಹೊಂದಿದ್ದು, ಅವರ ಸಾಧನೆಯನ್ನು ಯಕ್ಷಗಾನ ಅಕಾಡೆಮಿ ಗಮನಿಸಬೇಕು. ವರ್ತಮಾನದ ಅತ್ಯಂತ ಶ್ರೇಷ್ಠ ಯಕ್ಷಗಾನ ಕವಿ ‘ಪಾರ್ತಿಸುಬ್ಬ ಪ್ರಶಸ್ತಿ’ ಅವರಿಗೆ ಲಭಿಸುವಂತಾಗಲಿ ಎಂದು ಆಶಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಪ್ರಬಂಧಕ ಗಿರೀಶ್ ಹೆಗ್ಡೆ ಉಪಸ್ಥಿತರಿದ್ದರು. ಚಂದ್ರಹಾಸ ಕಯ್ಯರ್ ಪ್ರಾರ್ಥಿಸಿದರು. ಕೃತಿ ಪ್ರಕಟಿಸಿದ ಫಣಿಗಿರಿ ಪ್ರತಿಷ್ಠಾನದ ಅಧ್ಯಕ್ಷ ಉಮೇಶ್ ಶಿರೂರು ಸ್ವಾಗತಿಸಿದರು. ಯೋಗೀಶ್ ರಾವ್ ನಿರೂಪಿಸಿದರು. ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು ವಂದಿಸಿದರು.
ಕಾರ್ಯಕ್ರಮದ ಅಂಗವಾಗಿ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ಅವರ ಮಾರ್ಗದರ್ಶನದಲ್ಲಿ ದಿನಪೂರ್ತಿ ಯಕ್ಷಗಾನ ಪ್ರಸಂಗ ರಚನಾ ಕಮ್ಮಟ ನಡೆಯಿತು. ಯುವಪ್ರಸಂಗಕರ್ತರಾದ ದಿವಾಣ ದುರ್ಗಾಪ್ರಸಾದ್ ಭಟ್ ಕಟೀಲು, ಚಂದ್ರಹಾಸ ಕಯ್ಯರು, ಅಮೋಘ ಶಂಕರ ಉಜಿರೆ, ರಾಜಗೋಪಾಲ್ ಕನ್ಯಾನ, ಉಮೇಶ್ ಶಿರೂರು, ಯೋಗೀಶ್ ರಾವ್ ಚಿಗುರುಪಾದೆ, ದೀವಿತ್ ಪೆರಾಡಿ, ಶುಭಾಶಯ, ಮಯೂರ ನಾಯ್ಗ, ಗಿರೀಶ ಹೆಗ್ಡೆ ಧರ್ಮಸ್ಥಳ, ವರ್ಧನ್ ಎಂ.ಸುರತ್ಕಲ್ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net