ಸೆ.30ರ ವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

ಆಗುಂಬೆ ಘಾಟಿಯ ವಿಹಂಗಮ ನೋಟ. (ಸಾಂದರ್ಭಿಕ ಚಿತ್ರ)
ಆಗುಂಬೆ ಘಾಟಿಯ ವಿಹಂಗಮ ನೋಟ. (ಸಾಂದರ್ಭಿಕ ಚಿತ್ರ)
Published on

* ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ  ಟಿ.ಕೆ. ಆದೇಶ

ಉಡುಪಿ: ರಾಷ್ಟ್ರೀಯ ಹೆದ್ದಾರಿ (169-ಎ)ಯ ತೀರ್ಥಹಳ್ಳಿ-ಮಲ್ಪೆ ರಸ್ತೆ ಮಾರ್ಗದ ಆಗುಂಬೆ ಘಾಟಿಯಲ್ಲಿ ಮಳೆ ಹಾಗೂ ಭಾರಿ ವಾಹನಗಳ ಸಂಚಾರದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತದ ಸಂಭವವಿದೆ.
ತನ್ನಿಮಿತ್ತ ಸಾರ್ವಜನಿಕ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯಿದೆ ಪ್ರಕಾರ ಆಗುಂಬೆ ಘಾಟಿಯ ಮೂಲಕ ಸೆ.30ರ ವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶವಿಟ್ಟು ಭಾರಿ ವಾಹನಗಳ ಸಂಚಾರಕ್ಕೆ ರ್ನಿಬಂಧಿಸಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.  ಆದೇಶಿಸಿದ್ದಾರೆ.
ಬದಲಿ ಮಾರ್ಗ
ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ-ನಗರ-, ಕುಂದಾಪುರ ಹಾಗೂ ಉಡುಪಿ ಮಾರ್ಗವಾಗಿ ಮತ್ತು ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬರುವ ಭಾರಿ ವಾಹನಗಳು ಬಾಳೆಹೊನ್ನೂರು, ಮಾಗುಂಡಿ, ಕಳಸ- ಕುದುರೆಮುಖ- ಎಸ್​.ಕೆ. ಬಾರ್ಡರ್​ ಮಾರ್ಗವಾಗಿ ಸಂಚರಿಸಬೇಕು. ನರಸಿಂಹರಾಜಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕೊಪ್ಪ- ಜಯಪುರ, -ಬಾಳೆಹೊಳೆ- ಕಳಸ- ಕುದುರೆಮುಖ ಎಸ್​.ಕೆ. ಬಾರ್ಡರ್​ ಮಾರ್ಗವಾಗಿ ಸಂಚರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net