ಏ.19ಕ್ಕೆ ನಡೆಯಬೇಕಿದ್ದ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್​ ತಡೆ

ಕರ್ನಾಟಕ ಉಚ್ಚ ನ್ಯಾಯಾಲಯ.
ಕರ್ನಾಟಕ ಉಚ್ಚ ನ್ಯಾಯಾಲಯ.
Published on
* ಅರ್ಜಿದಾರ, ಸಂದ ಜಿಲ್ಲಾಧ್ಯಕ್ಷ ದಿನಕರ್​ ಶೆಟ್ಟಿ ಅಂಪಾರು ಮಾಹಿತಿ
ಉಡುಪಿ: ರಾಜ್ಯಾದ್ಯಂತ ಏ.19ರಂದು ನಡೆಯಬೇಕಿದ್ದಂತ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್​ ತಡೆಯಾಜ್ಞೆ ನೀಡಿದೆ. ಈಗಿನ ಎಲ್ಲ ಪ್ರಕ್ರಿಯೆ ಸ್ಥಗಿತಗೊಳಿಸಿ ಹೊಸದಾಗಿ ಚುನಾವಣಾ ಅಧಿಸೂಚನೆ ಹೊರಡಿಸಲು ನಿರ್ದೇಶಿಸಿದೆ ಎಂದು ಸಂದ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ಅರ್ಜಿದಾರರೂ ಆದ ದಿನಕರ್​ ಶೆಟ್ಟಿ ಅಂಪಾರು ಮಾಹಿತಿ ನೀಡಿದ್ದಾರೆ.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಮತದಾರರ ಪಟ್ಟಿಯ ಲೋಪ ಸೇರಿದಂತೆ ವಿವಿಧ ಹಗರಣಗಳನ್ನು ಪ್ರಶ್ನಿಸಿ 3 ಸಾವಿರಕ್ಕೂ ಅಧಿಕ ಶಿಕ್ಷಕರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ತಡೆಯಾಜ್ಞೆ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏ.19ರಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ನಿಗದಿಯಾಗಿತ್ತು. ಇದೀಗ ಇದೀಗ ಹೈಕೋರ್ಟ್​ ತಡೆಯಾಜ್ಞೆ ನೀಡಿದ್ದರಿಂದ ಚುನಾವಣೆ ಸ್ಥಗಿತಗೊಳ್ಳಲಿದ್ದು, ಹೊಸದಾಗಿ ಮತದಾರರ ಪಟ್ಟಿ ರಚಿಸಬೇಕಿದೆ. ಪಟ್ಟಿಯಿಂದ ಕೈಬಿಡಲಾಗಿದ್ದ ಅರ್ಹ ಶಿಕ್ಷಕರ ಸೇರ್ಪಡೆಯ ಬಳಿಕ ಚುನಾವಣೆ ನಡೆಸಲು ಅನುಮೋದನೆ ಪಡೆಯಬೇಕು. ನಂತರವೇ ಹೊಸ ಅಧಿಸೂಚನೆ ಪ್ರಕಟವಾಗಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.
"

ಉಡುಪಿ ಜಿಲ್ಲೆಯ ಮತದಾರರನ್ನು ದುರುದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿತ್ತು. ಅದನ್ನು ಪ್ರಶ್ನಿಸಿ ನಾನು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದೆ. ಇದೀಗ ಉಡುಪಿ ಜಿಲ್ಲೆಯವರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಹೈಕೋರ್ಟ್​ ನಿರ್ದೇಶನ ನೀಡಿದೆ. ಇದು ನ್ಯಾಯಪರ ಹೋರಾಟ, ಸತ್ಯಕ್ಕೆ ಸಂದ ಜಯವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net