ಉಡುಪಿ: ಶಿಸ್ತು, ತಾಳ್ಮೆ, ದಕ್ಷತೆ ಹಾಗೂ ಬದ್ಧತೆಗೆ ಹೆಸರಾಗಿರುವ ಗೃಹರಕ್ಷಕರಿಗೆ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ದೈಹಿಕವಾಗಿ ಸದೃಢರಾಗಿ ಉತ್ತಮ ಆರೋಗ್ಯ ಹೊಂದಲು ಸಾಧ್ಯ. ಸೇವೆಯಲ್ಲಿ ತಂಡವಾಗಿ ಕೆಲಸ ಮಾಡಲು ಕ್ರೀಡೆ ಪ್ರೇರಣೆ ನೀಡಲಿದೆ ಎಂದು ಮಂಗಳೂರು ಯೆನೆಪೋಯ ವಿಶ್ವವಿದ್ಯಾಲಯ ಕುಲಪತಿ ಡಾ.ವಿಜಯ್ ಕುಮಾರ್ ಹೇಳಿದರು.