ಉಡುಪಿ: ಕಾಲೇಜು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಜ್ಞಾನದ ಜತೆಗೆ ತಾರ್ಕಿಕ ಮನೋಭಾವ, ಸಂವಹನ ಕಲೆ, ತಂತ್ರಜ್ಞಾನಗಳ ಸಿದ್ಧತೆ, ವೃತ್ತಿ ಆಯ್ಕೆಯೂ ಅಗತ್ಯ. ಜೀವನಕ್ಕೆ ಬೇಕಾದ ಕೌಶಲ ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ಬದುಕು ಎದುರಿಸಬೇಕು. ಪದವಿ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಪ್ರಮುಖ ಹಂತವಾಗಿದೆ ಎಂದು ಪ್ರಾಂಶುಪಾಲ ಪ್ರೊ. ನಿತ್ಯಾನಂದ್ ವಿ. ಗಾಂವ್ಕರ್ ಅನಿಸಿಕೆ ವ್ಯಕ್ತಪಡಿಸಿದರು.