ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್ ಬೆಂಕಿಗಾಹುತಿ

ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
CRIME
CRIME
Published on: 

ಪಡುಬಿದ್ರಿ: ಇನ್ನಾ ಗ್ರಾಮದ ಕಾಂಜರಕಟ್ಟೆಯಲ್ಲಿ ಗುರುವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಹೋಟೆಲ್ ಬೆಂಕಿಗಾಹುತಿಯಾಗಿದೆ. ಪಡುಬಿದ್ರಿ- ಕಾರ್ಕಳ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಹೋಟೆಲನ್ನು ಮಾಲೀಕರು ರಾತ್ರಿ ಮುಚ್ಚಿ ಮನೆಗೆ ತೆರಳಿದ್ದರು. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸಾರ್ವಜನಿಕರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಕೈಗಾರಿಕಾ ಘಟಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣುಬಿಗಿದು ಯುವಕ ಆತ್ಮಹತ್ಯೆ

ಪಡುಬಿದ್ರಿ: ಮಧುಮೇಹ ಸಮಸ್ಯೆ ಹಾಗೂ ಮದ್ಯಪಾನ ಚಟ ಹೊಂದಿದ್ದ ಉದ್ಯಾವರ ಪಿತ್ರೋಡಿ ನಿವಾಸಿ ಮಿಥುನ್(37) ಎಂಬುವರು ಗುರುವಾರ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ವಾಡಿಕೊಂಡಿದ್ದಾರೆ. ಅವರನ್ನು ತಕ್ಷಣ ಉಡುಪಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಮಿಥುನ್ ಮೃತಪಟ್ಟಿರುವುದನ್ನು ಖಚಿತ ಪಡಿಸಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net