ಬೈಕ್ ಡಿಕ್ಕಿಯಾಗಿ ಹೋಟೆಲ್ ಕಾರ್ಮಿಕ ಸಾವು

ಸದಾಶಿವ ಕೋಟ್ಯಾನ್
ಸದಾಶಿವ ಕೋಟ್ಯಾನ್
Published on
ಪಡುಬಿದ್ರಿ: ಬೈಕ್ ಡಿಕ್ಕಿಯಾಗಿ ಮೂಳೂರಿನ ಹೋಟೆಲ್ ಒಂದರಲ್ಲಿ ಕಾರ್ಮಿಕರಾಗಿದ್ದ ಪಣಿಯೂರು ಸೆಂಟರ್ ನಿವಾಸಿ ಸದಾಶಿವ ಕೋಟ್ಯಾನ್(65) ಎಂಬುವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಬಸ್ ನಿಲ್ದಾಣದ ಬಳಿ ಗುರುವಾರ ನಡೆದಿದೆ. ಅಪಘಾತ ತೀವ್ರತೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಪರೀಕ್ಷಿಸಿದ ವೈದ್ಯರು, ಸದಾಶಿವ ಕೋಟ್ಯಾನ್ ಮೃತಪಟ್ಟಿರುವುದನ್ನು ಖಚಿತ ಪಡಿಸಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net