ಡಾ.ಅಕ್ಷತಾ ನಾಯಕ್ ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು. ಸಂಸ್ಥೆ ಆಡಳಿತ ನಿರ್ದೇಶಕ ಸಂಪತ್ ಕುಮಾರ್ ಮಾತನಾಡಿ, ‘ಆರೋಗ್ಯವೇ ಜೀವನದ ಅಮೂಲ್ಯ ಸಂಪತ್ತು’ ಧ್ಯೇಯದೊಂದಿಗೆ ಎಕ್ಸಲೆಂಟ್ ಸಂಸ್ಥೆ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುತ್ತಿದೆ. ನಿಯಮಿತ ದೈಹಿಕ ವ್ಯಾಯಾಮ, ಆರೋಗ್ಯಕರ ಜೀವನಶೈಲಿ, ಸ್ವಚ್ಛತೆ ಕುರಿತು ವಿವಿಧ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿದೆ ಎಂದರು. ಶ್ರೀಪ್ರಸಾದ್, ವಿಮಲ ಶೆಟ್ಟಿ ಉಪಸ್ಥಿತರಿದ್ದರು. ಚಾರ್ವಿ ನಿರೂಪಿಸಿದರು. ಪೂರ್ವಿ ವಂದಿಸಿದರು.