ಬಜ್ಪೆಯಲ್ಲಿ ಮಾನವ ಸರಪಳಿ ಪ್ರತಿಭಟನೆ

‘ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಬಜ್ಪೆ ಪೇಟೆಯಲ್ಲಿ ಮಂಗಳವಾರ ಬೃಹತ್ ಮಾನವ ಸರಪಳಿ ಪ್ರತಿಭಟನೆ ನಡೆಯಿತು.
‘ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಬಜ್ಪೆ ಪೇಟೆಯಲ್ಲಿ ಮಂಗಳವಾರ ಬೃಹತ್ ಮಾನವ ಸರಪಳಿ ಪ್ರತಿಭಟನೆ ನಡೆಯಿತು.
Published on
ಗುರುಪುರ: ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ಪ್ರಸ್ತಾವ ವಿರೋಧಿಸಿ ‘ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಬಜ್ಪೆ ಪೇಟೆಯಲ್ಲಿ ಮಂಗಳವಾರ ಬೃಹತ್ ಮಾನವ ಸರಪಳಿ ಪ್ರತಿಭಟನೆ ನಡೆಯಿತು.
ಖಾಸಗಿ ಕಾರ್ಪೋರೇಟ್ ಆಸ್ಪತ್ರೆಗಳ ಲಾಬಿಗೆ ಮಣಿದು ದ.ಕ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಆರೋಗ್ಯ ಇಲಾಖೆಯ ಕ್ರಮ ಖಂಡಿಸಿರುವ ಸಮಿತಿಯು ಜಿಲ್ಲೆಯಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದ್ರೋಗ ಆಸ್ಪತ್ರೆಯ ಘಟಕ ಸ್ಥಾಪಿಸಬೇಕು ಎಂದು ಒತ್ತಾಯಿಸಿದೆ.

ಬಜ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು. ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳ ನಿಯಂತ್ರಿಸಬೇಕು ಎಂದು ಒತ್ತಾಯಿಸಿ ನಡೆಸಲಾದ ಮಾನವ ಸರಪಳಿಯಲ್ಲಿ ನಾಗರಿಕರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net