ಕುಂದಾಪುರ: ಮಾನವ ಮಾನವನನ್ನು ಅರಿತು ಗೌರವಿಸಿ ಸಹಕಾರ ಸೌಹಾರ್ದತೆಯಿಂದ ಇರಲು ಮಾನವ ಹಕ್ಕು ಅತಿ ಅವಶ್ಯಕ. ಮಾನವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳು ಎಂದು ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ರೋಹಿಣಿ ಹೇಳಿದರು.
ಕುಂದಾಪುರ ಕೋಟೇಶ್ವರದ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಐಕ್ಯೂಎಸಿ ಮಾನವಿಕ ಸಂಘ ಇತಿಹಾಸ ಮತ್ತು ರಾಜ್ಯಶಾಸ್ತ್ರ ವಿಭಾಗ ಸಂಯುಕ್ತ ಆಶ್ರಯದಲ್ಲಿ ನಡೆದ ಮಾನವ ಹಕ್ಕುಗಳ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಾಂಶುಪಾಲ ರಾಮರಾಯ ಆಚಾರ್ಯ ಉದ್ಘಾಟಿಸಿದರು. ಐಕ್ಯೂಎಸಿ ಸಂಚಾಲಕ ನಾಗರಾಜ ಯು., ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ವಾಣಿಜ್ಯ ವಿಭಾಗ ಮುಖ್ಯಸ್ಥ ಡಾ.ಶೇಖರ್ ಬಿ., ಮಾನವ ಹಕ್ಕುಗಳ ಸಂಘದ ರಕ್ಷಿತಾ ಮತ್ತು ಗಣೇಶ ಉಪಸ್ಥಿತರಿದ್ದರು.
ಇತಿಹಾಸ ವಿಭಾಗ ಮುಖ್ಯಸ್ಥ ಗಣೇಶ್ ಪೈ ಎಂ.ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ.ಭಾಗೀರಥಿ ನಾಯ್ಕ ವಂದಿಸಿದರು. ವಿದ್ಯಾರ್ಥಿನಿ ನಾಗಮ್ಮ ಪ್ರಾರ್ಥಿಸಿದರು. ಕೃತಿಕಾ ಕಾರ್ಯಕ್ರಮ ನಿರೂಪಿಸಿದರು.