ನ. 5ರೊಳಗೆ ನೂತನ ಜಿಲ್ಲಾಸ್ಪತ್ರೆ ಆರಂಭಿಸದಿದ್ದರೆ ಉಪವಾಸ ಸತ್ಯಾಗ್ರಹ

ನವೆಂಬರ್​ 5ರೊಳಗೆ ರೋಗಿಗಳಿಗೆ ಚಿಕಿತ್ಸೆ ನೀಡುವ ಭರವಸೆ ಈಡೇರಿಸದಿದ್ದರೆ ಮತ್ತೆ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವಿಣ್​ಕುಮಾರ್​ ಶೆಟ್ಟಿ ಬಣ) ರಾಜ್ಯ ಸಂಚಾಲಕ ಪ್ರಸನ್ನ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
protest
ಕರ್ನಾಟಕ ರಕ್ಷಣಾ ವೇದಿಕೆ (ಪ್ರವಿಣ್​ಕುಮಾರ್​ ಶೆಟ್ಟಿ ಬಣ) ರಾಜ್ಯ ಸಂಚಾಲಕ ಪ್ರಸನ್ನ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Published on: 

ಉಡುಪಿ: ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾಸ್ಪತ್ರೆಯನ್ನು ತಕ್ಷಣವೇ ಸಾರ್ವಜನಿಕರ ಹಾಗೂ ಬಡ ರೋಗಿಗಳ ಬಳಕೆಗೆ ಮುಕ್ತಗೊಳಿಸಬೇಕು. ನವೆಂಬರ್​ 5ರೊಳಗೆ ರೋಗಿಗಳಿಗೆ ಚಿಕಿತ್ಸೆ ನೀಡುವ ಭರವಸೆ ಈಡೇರಿಸದಿದ್ದರೆ ಮತ್ತೆ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವಿಣ್​ಕುಮಾರ್​ ಶೆಟ್ಟಿ ಬಣ) ರಾಜ್ಯ ಸಂಚಾಲಕ ಪ್ರಸನ್ನ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನೂತನ ಆಸ್ಪತ್ರೆ ಪ್ರಾರಂಭಿಸುವಂತೆ ಆಗ್ರಹಿಸಿದರೂ ಜಿಲ್ಲಾಡಳಿತ ಸ್ಪಂದಿಸದ ಕಾರಣ ಅ. 4ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗಿತ್ತು. 5ರಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅಪರ ಜಿಲ್ಲಾಧಿಕಾರಿ, ಆಸ್ಪತ್ರೆಗೆ ಅಗತ್ಯವಿರುವ ಯಂತ್ರೋಪಕರಣಗಳ ಅಳವಡಿಕೆ ಕೆಲಸ ಪ್ರಾರಂಭಿಸಿ, ನವೆಂಬರ್​ 5ರೊಳಗೆ ರೋಗಿಗಳಿಗೆ ಚಿಕಿತ್ಸೆ ನೀಡುವ ಭರವಸೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಉಪವಾಸ ಸತ್ಯಾಗ್ರಹವನ್ನು ಹಿಂಪಡೆಯಲಾಗಿದೆ. ನವೆಂಬರ್​ 5ರೊಳಗೆ ನೂತನ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭವಾಗದಿದ್ದರೆ, ನವೆಂಬರ್​ 6ರಿಂದ ಜಿಲ್ಲಾಸ್ಪತ್ರೆಯ ಎದುರು ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಗೌರವಾಧ್ಯಕ್ಷ ಅನ್ಸಾರ್​ ಅಹಮದ್​ ಮಾತನಾಡಿ, ಸದ್ಯ ಕಾರ್ಯಾಚರಿಸುತ್ತಿರುವ ಆಸ್ಪತ್ರೆಯಲ್ಲಿ ಸುಸಜ್ಜಿತ ಯಂತ್ರೋಪಕರಣಗಳ ಕೊರತೆಯಿದೆ. ನೂತನ ಆಸ್ಪತ್ರೆಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಎಲ್ಲಾ ಸೌಲಭ್ಯಗಳನ್ನೊಳಗೊಂಡ ಯಂತ್ರೋಪಕರಣಗಳನ್ನು ಅಳವಡಿಸಿ ಬಡ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಸುಧೀರ್​ ಪೂಜಾರಿ, ಪದಾಧಿಕಾರಿಗಳಾದ ದೇವಕಿ ಬಾರ್ಕೂರು, ಸುಮಾ ಆಚಾರ್​, ಸೈಯದ್​ ನಿರಮ್​ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net