ಪ್ರಕೃತಿ ನಾಶ ವಾಡಿದರೆ ಮನುಷ್ಯ ಅವನತಿ

 ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ನಡೆಯುವ ಏಕಃಪವಿತ್ರ ಶ್ರೀಮನ್ನಾಗಮಂಡಲದ ರೈತಪೀಠ ಪ್ರಶಸ್ತಿಯನ್ನು ಬಿ.ಕೆ.ದೇವರಾಯ ಮಿತ್ತಬಾಗಿಲು ಅವರಿಗೆ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಪ್ರದಾನ ವಾಡಿದರು.
ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ನಡೆಯುವ ಏಕಃಪವಿತ್ರ ಶ್ರೀಮನ್ನಾಗಮಂಡಲದ ರೈತಪೀಠ ಪ್ರಶಸ್ತಿಯನ್ನು ಬಿ.ಕೆ.ದೇವರಾಯ ಮಿತ್ತಬಾಗಿಲು ಅವರಿಗೆ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಪ್ರದಾನ ವಾಡಿದರು.
Published on
ವಿಜಯವಾಣಿ ಸುದ್ದಿಜಾಲ ಹೆಬ್ರಿ
ಪ್ರಕೃತಿ ಚೆನ್ನಾಗಿದ್ದರೆ ನಾವೆಲ್ಲರೂ ಚೆನ್ನಾಗಿದ್ದೇವೆ ಎಂದರ್ಥ. ಪ್ರಕೃತಿಯನ್ನು ನಾಶ ವಾಡಿ ಬೆಳವಣಿಗೆ ಎನ್ನುವುದು ಹುಚ್ಚುತನ. ಮಣ್ಣು, ನೀರು, ಗಾಳಿ, ಬೆಂಕಿ, ಆಕಾಶ ಶುದ್ಧವಾಗಿರಬೇಕು. ಗೋಧಾಮದಲ್ಲಿ ಕೃಷಿ ಪೂರಕ ಉತ್ತಮ ಚಟುವಟಿಕೆ ನಡೆಯುತ್ತಿರುವುದು ಅಭಿನಂದನೀಯ ಎಂದು ಮಹಾರಾಷ್ಟ್ರ ಕೊಲ್ಲಾಪುರ ಸಿದ್ಧಗಿರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ನಡೆಯುತ್ತಿರುವ ಶ್ರೀಮನ್ನಾಗಮಂಡಲದಲ್ಲಿ 240ಕ್ಕೂ ಅಧಿಕ ಭಾರತೀಯ ಭತ್ತದ ತಳಿಗಳನ್ನು ಸಂರಕ್ಷಣೆ ವಾಡಿದ ಕೃಷಿ ಋಷಿ ಬಿ.ಕೆ.ದೇವರಾಯ ಮಿತ್ತಬಾಗಿಲು ಅವರಿಗೆ ಎಸ್‌ಕೆಎ್ ಸಂಸ್ಥೆ ನೀಡುವ ಪ್ರಥಮ ರೈತಪೀಠ ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವಚನ ನೀಡಿದರು.
ಬೆಳಗಾವಿ ನಿಡಸೋಸಿ ಶ್ರೀ ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ವಿಶ್ವಕರ್ಮ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಹರೀಶ್ ಆಚಾರ್ಯ ಜಲಕದಕಟ್ಟೆ, ಎಸ್‌ಕೆಜಿಐ ಕೋ- ಆಪರೇಟಿವ್ ಸೊಸೈಟಿ ಮಂಗಳೂರು ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುವಾರ್ ಶೆಟ್ಟಿ ಮುನಿಯಾಲು, ಸವಿತಾ ರಾಮಕೃಷ್ಣ ಆಚಾರ್, ಪ್ರಜ್ವಲ್ ಆಚಾರ್ಯ, ಶ್ರೀಮನ್ನಾಗಮಂಡಲದ ಸೇವಾ ಸಮಿತಿ ಅಧ್ಯಕ್ಷ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಸಾಣೂರುಗುತ್ತು, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಶೆಟ್ಟಿ ಕಾರ್ಕಳ ಇದ್ದರು. ನಾಗಮಂಡಲ ಅಧ್ಯಕ್ಷ ದೇವಿಪ್ರಸಾದ ಶೆಟ್ಟಿ ಸ್ವಾಗತಿಸಿದರು. ದಾಮೋದರ ಶರ್ಮ ನಿರೂಪಿಸಿದರು.

ಕೃತಿ ಅನಾವರಣ

ಪ್ರವರ್ತಕ ಡಾ.ಜಿ.ರಾಮಕೃಷ್ಣ ಆಚಾರ್ಯ ಅವರ ಸಾಧನೆ ಯಶೋಗಾಥೆ ‘ರೈತಪೀಠ ಇದು ಈ ನೆಲದ ಜ್ಞಾನಪೀಠ ಕೃತಿ’ಯನ್ನು ಮಹಾರಾಷ್ಟ್ರ ಕೊಲ್ಲಾಪುರ ಸಿದ್ಧಗಿರಿ ಮಠದ ಪೂಜ್ಯಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಬಿಡುಗಡೆ ವಾಡಿದರು.\

ತಮ್ಮ ಬದುಕನ್ನೇ ಕೃಷಿ ಕಾಯಕಕ್ಕೆ ಅರ್ಪಿಸಿರುವ ರೈತರ ತ್ಯಾಗ, ಪರಿಶ್ರಮ ಮತ್ತು ಮಹತ್ವ ಗುರುತಿಸುವ ಉದ್ದೇಶದಿಂದ ‘ರೈತಪೀಠ’ ಗೌರವ ಪ್ರಶಸ್ತಿಯನ್ನು ಸ್ಥಾಪಿಸಿ ರೈತರನ್ನು ಗೌರವಿಸುವುದು ನಮ್ಮ ಉದ್ದೇಶ. ಮುನಿಯಾಲಿನ ಗೋಧಾಮ ಎಂಬ ಕೃಷಿಲೋಕವನ್ನು ಕಂಡು ಯುವಕರು ಕೃಷಿಯಲ್ಲಿ ತೊಡಗಿ ಸುಂದರ ಬದುಕು ಕಟ್ಟಿಕೊಳ್ಳಬೇಕು ಎಂದು ಪ್ರಕೃತಿಯಿಂದ ಪ್ರಕೃತಿಗೆ ಎಂಬ ವಿನೂತನ ಪರಿಕಲ್ಪನೆಯಲ್ಲಿ ಶ್ರೀಮನ್ನಾಗಮಂಡಲದಲ್ಲಿ ರೈತಪೀಠ ಪ್ರಶಸ್ತಿ ಪ್ರದಾನ ವಾಡಿದ್ದೇವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net