ಮನಸ್ಸು, ಮನೆ ಸ್ವಚ್ಛವಿದ್ದರೆ ಸಂಪತ್ತು ಸಂಗ್ರಹ

 ಕ್ಷೇಮವನದ ಸಿಇಒ ಶ್ರದ್ಧಾ ಅಮಿತ್ ಕಾರ್ಯಕ್ರಮ ಉದ್ಘಾಟಿಸಿದರು. ಅಶ್ವಿನಿ ಅರವಿಂದ ಹೆಬ್ಬಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಇಒ ಅನಿಲ್ ಕುಮಾರ್ ಎಸ್.ಎಸ್. ಮೊದಲಾದವರಿದ್ದರು.
ಕ್ಷೇಮವನದ ಸಿಇಒ ಶ್ರದ್ಧಾ ಅಮಿತ್ ಕಾರ್ಯಕ್ರಮ ಉದ್ಘಾಟಿಸಿದರು. ಅಶ್ವಿನಿ ಅರವಿಂದ ಹೆಬ್ಬಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಇಒ ಅನಿಲ್ ಕುಮಾರ್ ಎಸ್.ಎಸ್. ಮೊದಲಾದವರಿದ್ದರು.
Published on

ಬೆಳ್ತಂಗಡಿ: ಅಷ್ಟಲಕ್ಷ್ಮೀಯರು ಒಲಿದರೆ ಮಾತ್ರ ವಿಜಯ ಒಲಿಯುತ್ತದೆ. ಲಕ್ಷ್ಮೀ ಚಂಚಲೆಯಾಗಲು ನಾವೇ ಕಾರಣವಾಗಿದ್ದು ಮನಸ್ಸು, ಮನೆ ಸ್ವಚ್ಛವಿದ್ದರೆ ಲಕ್ಷ್ಮೀ ಚಂಚಲೆ ಆಗುವುದಿಲ್ಲ. ಸಂಪತ್ತಿನ ರಕ್ಷಣೆಗೆ ಸಜ್ಜನರ ಸಂಗ ಅಗತ್ಯ ಎಂದು ಬೆಂಗಳೂರು ಕ್ಷೇಮವನದ ಸಿಇಒ ಶ್ರದ್ಧಾ ಅಮಿತ್ ಹೇಳಿದರು.

ಶುಕ್ರವಾರ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಹಿಳಾ ವಿಭಾಗದಿಂದ ನಡೆದ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಸೂಕ್ತ ಹವನ ಕಾರ್ಯಕ್ರಮದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಧಾರ್ಮಿಕ ಉಪನ್ಯಾಸ ನೀಡಿದ ಅಶ್ವಿನಿ ಅರವಿಂದ ಹೆಬ್ಬಾರ್ ಸಾರ್ವಜನಿಕವಾಗಿ ಹಬ್ಬಗಳನ್ನು ಆಚರಿಸುವುದರಿಂದ ಸಮಾಜದ ಬೆಳವಣಿಗೆ ಉಂಟಾಗುತ್ತದೆ. ಪ್ರಕೃತಿಯನ್ನು ರಕ್ಷಿಸುವುದು ಮಾನವನ ಕರ್ತವ್ಯ ಎಂದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಇಒ ಅನಿಲ್ ಕುಮಾರ್ ಎಸ್.ಎಸ್., ಕೊಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ದಾಸಪ್ಪ ಗೌಡ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತೀಶ್ ಕಾಮತ್, ಮಿತ್ತಬಾಗಿಲು ಪಿಡಿಒ ಮೋಹನ್ ಬಂಗೇರ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೇಶವ, ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್ ಉಪಸ್ಥಿತರಿದ್ದರು.
ಮಹಿಳಾ ಸಮಿತಿ ಗೌರವಾಧ್ಯಕ್ಷೆ ಜ್ಯೋತಿಲಕ್ಷ್ಮೀ ಸ್ವಾಗತಿಸಿದರು. ಮಹಿಳಾ ವಿಭಾಗದ ಕಾರ್ಯದರ್ಶಿ ಮೀನಾಕ್ಷಿ ಮಹಾಬಲ ಗೌಡ ನಿರೂಪಿಸಿದರು. ಮಹಿಳಾ ವಿಭಾಗದ ಅಧ್ಯಕ್ಷೆ ವನಿತಾ ಉಮೇಶ್ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net