ಟಾಸ್ಕ್​ಫೋರ್ಸ್​ ಅನುಮೋದನೆಗೆ ಪ್ರಯತ್ನಿಸುವೆ

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ.
Published on

* ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿ, ಮಹಿಳೆ ಸಾವು ಪ್ರಕರಣ 

ಉಡುಪಿ: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟಿರುವ ಘಟನೆ ಬಹಳ ನೋವಿನ ಸಂಗತಿ. ಈ ವಿಚಾರದಲ್ಲಿ ಒಬ್ಬರನ್ನೊಬ್ಬರು ದೂರುವುದು ಸರಿಯಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಎರಡೂ ಇದಕ್ಕೆ ಜವಾಬ್ದಾರರು. ಈ ವಿಚಾರವಾಗಿ ಟಾಸ್ಕ್​ಫೋರ್ಸ್​ ರಚನೆಗೆ ರಾಜ್ಯದಿಂದ ಸಮಗ್ರ ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾದರೆ ತಕ್ಷಣವೇ ಅನುಮೋದನೆ ಕೊಡಿಸಲು ಪ್ರಯತ್ನಿಸುವುದಾಗಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.
ಉಡುಪಿಯಲ್ಲಿ ಭಾನುವಾರ (ಫೆ.22) ಮಾಧ್ಯಮದವರೊಂದಿಗೆ ಮಾತನಾಡಿ, ಆನೆ ದಾಳಿ ತಡೆಯುವ ನಿಟ್ಟಿನಲ್ಲಿ 32 ಸಿಬ್ಬಂದಿ ಒಳಗೊಂಡ ಟಾಸ್ಕ್​ಫೋರ್ಸ್​ಅನ್ನು ಅರಣ್ಯ ಇಲಾಖೆ ಸರ್ಕಾರಕ್ಕೆ ಸಿದ್ಧಪಡಿಸಿಕೊಟ್ಟಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಾನೂ ಮಾತನಾಡಿದ್ದೇನೆ ಎಂದರು.

ಅಧಿಕಾರಿಗಳೊಂದಿಗೆ ಮಾತನಾಡಿರುವೆ

ಟಾಸ್ಕ್​ಫೋರ್ಸ್​ ಅನುಮೋದನೆಯಾದರೆ ಆನೆಗಳ ಮೇಲೆ ಕಣ್ಗಾವಲು ಇಡಲು ಸಾಧ್ಯವಾಗಲಿದ್ದು, ಜನರ ಸಾವು ತಡೆಯಲು ಸಾಧ್ಯ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಆ ವಿಚಾರವಾಗಿ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೂ ಮಾತನಾಡಿದ್ದೇನೆ. ಅವರೂ ಸಹ ಅನುಮೋದನೆಯ ಭರವಸೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಅರಣ್ಯ ಸಚಿವರೊಂದಿಗೂ ಸಹ ಈ ವಿಚಾರ ಮಾತನಾಡಿದ್ದಾಗಿ ಸಂಸದ ಕೋಟ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net