ಅನಧಿಕೃತ ಮಾರ್ಪಾಡು ಮಾಡಿದ ಗನ್​ ವಶ

ಶಸ್ತ್ರಾಸ್ತ್ರ ಅಕ್ರಮ ಬಳಕೆ ಮತ್ತು ದುರುಪಯೋಗ ತಡೆಯುವ ನಿಟ್ಟಿನಲ್ಲಿ ಪೊಲೀಸರು ವಿಶೇಷ ತಪಾಸಣಾ ಕಾರ್ಯಾಚರಣೆ ಕೈಗೊಂಡಿದ್ದು, ಅನಧಿಕೃತವಾಗಿ ಡಿಸೈನ್​ ಮಾರ್ಪಾಡು ಮಾಡಿದ್ದ 4 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
Illegally modified gun
ಅನಧಿಕೃತವಾಗಿ ಮಾರ್ಪಾಡು ಮಾಡಿದ ಗನ್​.
Published on: 

ಉಡುಪಿ: ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ಅಕ್ರಮ ಬಳಕೆ ಮತ್ತು ದುರುಪಯೋಗ ತಡೆಯುವ ನಿಟ್ಟಿನಲ್ಲಿ ಪೊಲೀಸರು ವಿಶೇಷ ತಪಾಸಣಾ ಕಾರ್ಯಾಚರಣೆ ಕೈಗೊಂಡಿದ್ದು, ಅನಧಿಕೃತವಾಗಿ ಡಿಸೈನ್​ ಮಾರ್ಪಾಡು ಮಾಡಿದ್ದ 4 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಶಸ್ತ್ರಾಸ್ತ್ರ ಬಳಕೆಗೆ ಸಂಬಂಧಿಸಿದಂತೆ ದೂರುಗಳು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ, ಎಸ್ಪಿ ಮಾರ್ಗದರ್ಶನದಲ್ಲಿ ಜಿಲ್ಲಾದ್ಯಂತ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಗನ್​ ಲೈಸೆನ್ಸ್​ ಹೊಂದಿರುವವರ ಹಿನ್ನೆಲೆ, ಶಸ್ತ್ರಾಸ್ತ್ರಗಳ ಪ್ರಸ್ತುತ ಸ್ಥಿತಿ ಬಗ್ಗೆ ಪೊಲೀಸರು ಸತತ ಒಂದು ತಿಂಗಳು ಜಾಲಾಡಿದ್ದಾರೆ.

2,925 ಶಸ್ತ್ರಾಸ್ತ್ರ ಪರಿಶೀಲನೆ

ಕಾರ್ಯಾಚರಣೆ ವೇಳೆ ಜಿಲ್ಲಾದ್ಯಂತ ಒಟ್ಟು 2,925 ಶಸ್ತ್ರಾಸ್ತ್ರಗಳನ್ನು ಖುದ್ದು ತಪಾಸಣೆಗೊಳಪಡಿಸಲಾಗಿದೆ. ತಪಾಸಣೆ ವೇಳೆ 4 ಗನ್​ಗಳನ್ನು ನಿಯಮಬಾಹಿರವಾಗಿ ಮಾರ್ಪಾಡು ಮಾಡಿರುವುದು ಕಂಡುಬಂದಿದೆ. ಈ ಸಂಬಂಧ ಶಂಕರನಾರಾಯಣ, ಕೋಟ, ಬ್ರಹ್ಮಾವರ ಹಾಗೂ ಕಾರ್ಕಳ ಟೌನ್​ ಪೊಲೀಸ್​ ಠಾಣೆಗಳಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಜೊತೆಗೆ ಜಿಲ್ಲೆಯಲ್ಲಿ ರೌಡಿಶೀಟರ್​ಗಳಾಗಿದ್ದು ಶಸ್ತ್ರಾಸ್ತ್ರ ಪರವಾನಗಿ ಹೊಂದಿರುವವರ ನಡವಳಿಕೆ ಹಾಗೂ ಅವರ ಮೇಲೆ ಹೊಸ ಕೇಸ್​ಗಳು ದಾಖಲಾಗಿವೆಯೇ ಎಂಬುದರ ಬಗ್ಗೆಯೂ ಪೊಲೀಸರು ತೀವ್ರ ನಿಗಾವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net