ಉಡುಪಿ: ಕಾಪು ತಾಲೂಕಿನ ಮುದರಂಗಡಿಯಲ್ಲಿ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಗಳಾದ ಭೂಗತ ಪಾತಕಿ ಹೇಮಂತ್ ಪೂಜಾರಿಯ ಸಹೋದರ ಕಿಶೋರ್ ಪೂಜಾರಿ (ಕೆಪಿ) ಹಾಗೂ ಸದಾನಂದ ಕುತ್ಯಾರ್ ಎಂಬವರನ್ನು ಬಂಧಿಸಿರುವ ಪೊಲೀಸರು, ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಶುಕ್ರವಾರ (ಆ.14) ಹಾಜರುಪಡಿಸಿದರು.