ಪೆಮ್ ಸಂಸ್ಥೆಯ ಮುಖ್ಯಸ್ಥ ರತ್ನಕುಮಾರ್, ಕಠಿಣ ಪರಿಶ್ರಮದಿಂದ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು. ಸಂಸ್ಥೆಯ ಕೋಶಾಧಿಕಾರಿ ಪ್ರ್ರೊ. ಕೆ. ಸದಾಶಿವ ರಾವ್, ಹಿರಿಯರಾದ ಯು. ವಿಶ್ವನಾಥ ಶೆಣೈ, ಶಿಬಿರದ ನಿರ್ದೇಶಕ, ಮೈಲೈಫ್ ಸಂಸ್ಥೆಯ ಸ್ಥಾಪಕ ಪ್ರವಿಣ್ ಗುಡಿ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಅನಂತರಾಜ ಉಪಾಧ್ಯಾಯ, ಅಶೋಕ್ ಎಂ. ಹಾಗೂ ಡಾ. ಪ್ರತಿಮಾ ಜೆ. ಆಚಾರ್ಯ ಸಹಕರಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯೊಂದಿಗೆ ಕಾರ್ಯಕ್ರಮ ನಿರೂಪಿಸಿದರು.