ಉಡುಪಿ: ಅಗಲವಾದ ರಸ್ತೆ, ಕಟ್ಟಡ, ಮಾಲ್ಗಳ ಸಹಿತ ಜಿಲ್ಲೆ ಬೆಳೆದಿದೆ. ಆದರೆ, ಜಿಲ್ಲೆಯ ಅಸ್ಮಿತೆ, ಅಸ್ತಿತ್ವಕ್ಕೆ ಇದಷ್ಟೇ ಸಾಲುವುದಿಲ್ಲ. ಕಲೆ, ಸಾಹಿತ್ಯ, ಸಂಸತಿಯೂ ಅಗತ್ಯ. ಅಭಿವೃದ್ಧಿ ಮತ್ತು ಸಂಸತಿ ಒಟ್ಟಿಗೆ ಸಾಗಿದರೆ ಮಾತ್ರ ಸಹನಾಶೀಲ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಸುಮನಸಾ ಕೊಡವೂರು ರಜತ ಸಂಭ್ರಮ ಸಮಿತಿ ಅಧ್ಯಕ್ಷ ಹರಿಪ್ರಸಾದ್ ರೈ ವಿಶ್ಲೇಷಿಸಿದರು.