ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರಿನ ಎಂಎಸ್‌ಎಂಇ ಜಂಟಿ ನಿರ್ದೇಶಕ ಸುಂದರ್ ಶೇರಿಗಾರ್, ಮಡಿಕೇರಿ ಕಾರ್ಪೊರೇಷನ್ ಬ್ಯಾಂಕ್‌ನ ಪ್ರಮುಖ ಜಿಲ್ಲಾ ವ್ಯವಸ್ಥಾಪಕ ಆರ್.ಕೆ.ಬಾಲಚಂದ್ರ, ಮಣಿಪಾಲದ ಬಯೋ ಇನ್ಕ್ಯುಬೇಟರ್‌ನ ವ್ಯವಸ್ಥಾಪಕ ಡಾ.ಕ್ಲಾವಿಯನ್ ಮಿರಾಂಡಾ, ಅಲರ್ ಇನ್ನೋವೇಶನ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಸಚಿನ್ ಭಟ್ ಮತ್ತು ನಿಟ್ಟೆ ಅಕ್ವಾಮರೀನ್ ಸೆಂಟರ್ ಆಫ್ ಎಕ್ಸಲೆನ್ಸ್‌ನ ಮುಖ್ಯಸ್ಥ ಆಶಿಕ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಕರ್ನಾಟಕ ತಾಂತ್ರಿಕ ಉನ್ನತೀಕರಣ ಮಂಡಳಿಯ ಸಹಾಯಕ ಸಲಹೆಗಾರ ಅರವಿಂದ್ ಬಾಲೇರಿ ಕಾರ್ಯಕ್ರಮ ಸಂಯೋಜಿಸಿದರು.