ವಿನೂತನ ಪ್ರಯತ್ನಗಳು ಸೃಜನಶೀಲತೆಗೆ ಸಾಕ್ಷಿ

 ಡಾ.ಶೇಖರ್ ಅಜೆಕಾರು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪತ್ರಕರ್ತ ದಯಾನಂದ ಕುಂಟಾಡಿ ಪೈ ಅವರಿಗೆ ಪ್ರಶಸ್ತಿ ಪ್ರದಾನಿಸಲಾಯಿತು. ಪ್ರಮುಖರಾದ ಡಾ.ಮೋಹನ್ ಆಳ್ವ, ಡಾ.ರವೀಂದ್ರ ಶೆಟ್ಟಿ ಬಜಗೋಳಿ, ಪ್ರಭಾಕರ ಶೆಟ್ಟಿ ಕೊಂಡಳ್ಳಿ, ದೇವಿಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು.
ಡಾ.ಶೇಖರ್ ಅಜೆಕಾರು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪತ್ರಕರ್ತ ದಯಾನಂದ ಕುಂಟಾಡಿ ಪೈ ಅವರಿಗೆ ಪ್ರಶಸ್ತಿ ಪ್ರದಾನಿಸಲಾಯಿತು. ಪ್ರಮುಖರಾದ ಡಾ.ಮೋಹನ್ ಆಳ್ವ, ಡಾ.ರವೀಂದ್ರ ಶೆಟ್ಟಿ ಬಜಗೋಳಿ, ಪ್ರಭಾಕರ ಶೆಟ್ಟಿ ಕೊಂಡಳ್ಳಿ, ದೇವಿಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು.
Published on

ವಿಜಯವಾಣಿ ಸುದ್ದಿಜಾಲ ಕಾರ್ಕಳ

ಪತ್ರಕರ್ತ ದಿ.ಡಾ.ಶೇಖರ್ ಅಜೆಕಾರು ಕನ್ನಡ ಹಾಗೂ ತುಳು ಭಾಷಾ ಚಟುವಟಿಗಳಿಗೆ ಅಳಿಲು ಸೇವೆ ನೀಡಿದವರು. ಸಮಾಜದ ಬಗ್ಗೆ ಅವರಿಗಿದ್ದ ಪರಿಕಲ್ಪನೆ, ವಿಚಾರವಂತಿಕೆ, ಸೃಜನಶೀಲತೆ ಗಮನಾರ್ಹವಾಗಿತ್ತು. ಆದಿಗ್ರಾಮೋತ್ಸವ ಪರಿಕಲ್ಪನೆ, ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸೇರಿದಂತೆ ಹಲವು ವಿನೂತನ ಪ್ರಯತ್ನಗಳು ಅವರ ಸೃಜನಶೀಲತೆಗೆ ಸಾಕ್ಷಿ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಮೋಹನ್ ಆಳ್ವ ಹೇಳಿದರು.
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಾಣೂರು ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಡೆದ 2025-26ನೇ ಸಾಲಿನ ಡಾ.ಶೇಖರ್ ಅಜೆಕಾರು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪತ್ರಕರ್ತ ದಯಾನಂದ ಕುಂಟಾಡಿ ಪೈ ಅವರಿಗೆ ಪ್ರಶಸ್ತಿ ಪ್ರದಾನಿಸಿ ಮಾತನಾಡಿದರು.
ಕರ್ನಾಟಕ ಕ್ವಾರಿ ಮತ್ತು ಕ್ರಶರ್ ಅಸೋಸಿಯೇಶನ್ ಅಧ್ಯಕ್ಷ ಡಾ.ರವೀಂದ್ರ ಶೆಟ್ಟಿ ಬಜಗೋಳಿ, ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕು ಘಟಕ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ರಾಜರಾಜೇಶ್ವರಿ ನ್ಯಾಷನಲ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ದೇವಿಪ್ರಸಾದ್ ಶೆಟ್ಟಿ ಮಾತನಾಡಿದರು.
ಡಾ.ಶೇಖರ್ ಅಜೆಕಾರು ಅವರ ಪತ್ನಿ ತಾರಾ ಅವರಿಗೆ ಆರ್ಥಿಕ ನೆರವು ನೀಡಲಾಯಿತು. ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ಜಿಲ್ಲಾ ಸಮಿತಿ ಕಾರ್ಯದರ್ಶಿ ನಜೀರ್ ಪೊಲ್ಯ, ಉಪಾಧ್ಯಕ್ಷ ಉದಯ ಕುಮಾರ್, ತಾಲೂಕು ಸಂಘದ ಕೋಶಾಧಿಕಾರಿ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು. ಹರೀಶ್ ಆಚಾರ್ಯ ಅಭಿನಂದನಾ ಪತ್ರ ವಾಚಿಸಿದರು. ಸಿದ್ದಾಪುರ ವಾಸುದೇವ ಭಟ್ ಕಾರ್ಯಕ್ರಮ ನಿರೂಪಿಸಿದರು. ಹರೀಶ್ ಪೂಜಾರಿ ಸಚ್ಚೇರಿಪೇಟೆ ವಂದಿಸಿದರು.

ಡಾ.ಶೇಖರ್ ಅಜೆಕಾರು ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿರುವುದು ಆತ್ಮ ಮೆಚ್ಚುವ ಕಾರ್ಯ. ಜನ್ಮದಿಂದ ಯಾರೂ ದೊಡ್ಡವರಾಗುವುದಿಲ್ಲ, ಕಾರ್ಯದಿಂದ ದೊಡ್ಡವರಾಗುತ್ತಾರೆ. ಜೀವನದಲ್ಲಿ ಒಳ್ಳೆಯ ಕಾರ್ಯ ಮಾಡಿದಾಗ ಸಮಾಜ ಗುರುತಿಸುತ್ತದೆ.

— ಪ್ರಭಾಕರ ಶೆಟ್ಟಿ ಕೊಂಡಳ್ಳಿ ಅಧ್ಯಕ್ಷ, ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕು ಘಟಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net