ಕ್ರೀಡಾ ದಾಖಲೆ ಸಾಧನೆಗೆ ಸ್ಫೂರ್ತಿ

ಕ್ರೀಡಾ ಸಾಧಕರನ್ನು ಗೌರವಿಸಲಾಯಿತು. ಪ್ರಮುಖರಾದ ಡಾ.ಸುಧಾಕರ ಶೆಟ್ಟಿ, ರವೀಂದ್ರ ಉಪಾಧ್ಯ, ರಮೇಶ್ ಕಾಂಚನ್ ಮೊದಲಾದವರಿದ್ದರು.
ಕ್ರೀಡಾ ಸಾಧಕರನ್ನು ಗೌರವಿಸಲಾಯಿತು. ಪ್ರಮುಖರಾದ ಡಾ.ಸುಧಾಕರ ಶೆಟ್ಟಿ, ರವೀಂದ್ರ ಉಪಾಧ್ಯ, ರಮೇಶ್ ಕಾಂಚನ್ ಮೊದಲಾದವರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಕಾರ್ಕಳ
ಕ್ರೀಡಾ ದಾಖಲೆಗಳ ವಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ ಸ್ಫೂರ್ತಿಯಾಗಿರುತ್ತದೆ. ದೈಹಿಕ ಶಿಕ್ಷಣ ಉಪನ್ಯಾಸಕರು ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಹಾಗೂ ಕ್ರೀಡಾ ಸಾಧಕರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಅಜೆಕಾರು ಪದ್ಮಗೋಪಾಲ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಹೇಳಿದರು.
ಮಣಿಪಾಲ ವಿದ್ಯಾನಗರದ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂದ ವತಿಯಿಂದ ನಡೆದ ರಾಷ್ಟ್ರೀಯ ಪಂದ್ಯಾಟ ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಾಧಕರನ್ನು ಸನ್ಮಾನಿಸಿ ವಾತನಾಡಿದರು.
ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ಉಪನಿರ್ದೇಶಕ ರವೀಂದ್ರ ಉಪಾಧ್ಯ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ಜಿಲ್ಲಾ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂದ ಅಧ್ಯಕ್ಷ ಮಂಜುನಾಥ ಭಟ್, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ. ಪೂ.ಕಾಲೇಜುಗಳ ಪ್ರಾಂಶುಪಾಲರ ಸಂದ ಅಧ್ಯಕ್ಷ ದಯಾನಂದ ಪೈ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿಇಒ ದಿನೇಶ್ ಎಂ.ಕೊಡವೂರು, ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಉಡುಪಿ ಜಿಲ್ಲಾ ಪ.ಪೂ. ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂದ ಅಧ್ಯಕ್ಷ ಸತೀಶ್ ಹೆಗ್ಡೆ ಶಾನಾಡಿ, ಕ್ರೀಡಾ ಸಂಯೋಜಕ ದಿನೇಶ್ ಕುವಾರ್ ಎ., ಕಾರ್ಯದರ್ಶಿ ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.
ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಉಪನ್ಯಾಸಕಿ ಶಮಿತಾ ಹಾಗೂ ಅಮೃತಾ ಭಾರತಿ ಕಾಲೇಜಿನ ವಿಜಯ್ ಶೆಟ್ಟಿ ನಿರೂಪಿಸಿದರು.

ಕ್ರೀಡಾ ಸಾಧಕರಿಗೆ ಸನ್ಮಾನ

ರಾಷ್ಟ್ರೀಯ ಪಂದ್ಯಾಟ ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಾಧಕರನ್ನು ಮತ್ತು ತರಬೇತುದಾರರಿಗೆ ಹಾಗೂ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ನಿವೃತ್ತ ಉಪನಿರ್ದೇಶಕ ವಾರುತಿ, ಮಂಗಳೂರು ಉತ್ತರದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಜೀವನ್ ಕುವಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net