ಮೈಸೂರು ದಸರಾ ಸಮಾರಂಭಕ್ಕೆ ಪಲಿಮಾರು ಶ್ರೀಗಳಿಗೆ ಆಹ್ವಾನ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ -ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವಂತೆ ಪಲಿಮಾರು ಮಠದ ಶ್ರೀ ವಿದ್ಯಾಧಿಶ ತೀರ್ಥ ಶ್ರೀಪಾದರನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಆಹ್ವಾನಿಸಿದೆ.
mysore dasara
ಪಲಿಮಾರು ಶ್ರೀಗಳುJanardhanKodavoor
Published on: 

ಉಡುಪಿ: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ -ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವಂತೆ ಪಲಿಮಾರು ಮಠದ ಶ್ರೀ ವಿದ್ಯಾಧಿಶ ತೀರ್ಥ ಶ್ರೀಪಾದರನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಆಹ್ವಾನಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್​. ತಂಗಡಗಿ ಆಹ್ವಾನ ಪತ್ರವನ್ನು ರವಾನಿಸಿದ್ದು, ಆ.11ರಂದು ಬೆಳಿಗ್ಗೆ 11.50ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಕೊಪ್ಪಳ ಗವಿಮಠದ ಪೀಠಾಧಿಪತಿ ಅಭಿನವ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆ, ಕಲೆ, ಸಾಹಿತ್ಯ ಹಾಗೂ ಜನಪದ ಶ್ರೀಮಂತಿಕೆಯನ್ನು ಬಿಂಬಿಸುವ ಈ ಮಹೋತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಬೇಕೆಂದು ಸಚಿವರು ಶ್ರೀಗಳಲ್ಲಿ ವಿನಂತಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net